ಮಂಗಳವಾರ, ಡಿಸೆಂಬರ್ 7, 2021
20 °C

ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ; ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಬಜರಂಗದಳದ ಕಾರ್ಯಕರ್ತರಿಗೆ ಆಯುಧಪೂಜೆಯ ಅಂಗವಾಗಿ ತ್ರಿ‌ಶೂಲ ದೀಕ್ಷೆ ನೀಡಿದ ಘಟನೆ ಮಾಧ್ಯಮಗಳ ಮೂಲಕ ಬಹಿರಂಗವಾಗಿದ್ದು, ಸರ್ಕಾರ ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಯು.ಟಿ. ಖಾದರ್‌ ಆಗ್ರಹಿಸಿದರು.

ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆ ಕಾಪಾಡಬೇಕಾಗಿದ್ದು ಸರ್ಕಾರದ ಕೆಲಸ. ಯಾವ ಕಾರಣಕ್ಕಾಗಿ ತ್ರಿಶೂಲ ದೀಕ್ಷೆ ನೀಡಲಾಗಿದೆ ಎನ್ನುವುದನ್ನು ಪತ್ತೆ ಹಚ್ಚಬೇಕು. ಸತ್ಯ ಬಹಿರಂಗವಾಗಬೇಕು. ಇಲ್ಲವಾದರೆ ಕಾನೂನಿಗೆ ಬಗ್ಗೆ ಜನರಿಗೆ ನಂಬಿಕೆ ಉಳಿಯುವುದಿಲ್ಲ ಎಂದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು