ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಕೋವಿಡ್-19ನಿಂದ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

Last Updated 20 ಮೇ 2020, 8:25 IST
ಅಕ್ಷರ ಗಾತ್ರ

ಧಾರವಾಡ: ಕೋವಿಡ್-19 ಸೋಂಕಿನಿಂದ ಗುಣಮುಖರಾಗಿರುವ ಇಬ್ಬರು ವ್ಯಕ್ತಿಗಳನ್ನು ಹುಬ್ಬಳ್ಳಿಯ ಕಿಮ್ಸ್‌ನಿಂದ ಮಂಗಳವಾರ (ಮೇ 19) ರಾತ್ರಿ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದ ಹುಬ್ಬಳ್ಳಿ ಮುಲ್ಲಾ ಓಣಿಯ ಪಿ- 430 (30 ವರ್ಷದ ಮಹಿಳೆ) ಹಾಗೂ ಆಝಾದ್ ಕಾಲನಿಯ ಪಿ-431 (13 ವರ್ಷದ ಬಾಲಕಿ) ಸಂಪೂರ್ಣ ಗುಣಮುಖರಾಗಿದ್ದಾರೆ.
24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರು ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 09 ಜನ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಜಿಲ್ಲೆಯ 17 ಜನ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT