ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕಮಲಾಪುರದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಮಹ್ಮದ್ ಕುಡಚಿ ಎಂಬ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರವಾಡದ ಕಮಲಾಪುರದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಮಹ್ಮದ್ ಮನೆ ಎದುರು ಕುಳಿತಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ.
ಕುಡಚಿ ಅವರ ಮನೆಯಿಂದ ಅನತಿ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಆ ಶವ ಕೂಡ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಚಿ ಅವರ ಮನೆಯಿಂದಲೇ ಆ ವ್ಯಕ್ತಿ ಕೂಡ ಓಡಿ ಹೋಗಿರುವ ಸಾಧ್ಯತೆ ಇದೆ. ರಸ್ತೆಯುದ್ದಕ್ಕೂ ರಕ್ತ ಚೆಲ್ಲಾಡಿದೆ. ದುಷ್ಕರ್ಮಿಗಳು ಆತನನ್ನೂ ಅಟ್ಟಾಡಿಸಿಕೊಂಡು ಹತ್ಯೆ ಮಾಡಿರಬಹುದು. ಆತನ ಹೆಸರು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಹಾಗೂ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.