ಹುಬ್ಬಳ್ಳಿ: ಅವಳಿ ನಗರದಲ್ಲಿ 57 ಅನಧಿಕೃತ ಬಡಾವಣೆಗಳನ್ನು ಗುರುತಿಸಲಾಗಿದ್ದು, ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ ಕಲಬುರ್ಗಿ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಸರಿಪಡಿಸದಿದ್ದರೆ, ತೆರವು ಮಾಡಲಾಗುವುದು ಎಂದು ಹೇಳಿದರು. ಹುಬ್ಬಳ್ಳಿಯಲ್ಲಿ 30, ಧಾರವಾಡದಲ್ಲಿ 27 ಅನಧಿಕೃತ ಬಡಾವಣೆಗಳಿವೆ ಎಂದರು.

ಹುಡಾ ವ್ಯಾಪ್ತಿಯ 126 ನಿವೇಶನಗಳ ಹರಾಜಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುಂಪು ವಸತಿ ಯೋಜನೆಯಡಿ 160 ಮನೆ ನಿರ್ಮಾಣದ ಪ್ರಸ್ತಾವವನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.

ಉಣಕಲ್, ತಡಸಿನಕೊಪ್ಪದಲ್ಲಿ 50:50 ಅನುಪಾತದಲ್ಲಿ ರೈತರೊಂದಿಗೆ ನಿವೇಶನಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. 100 ಎಕರೆ ನೀಡಲು ಮುಂದೆ ಬಂದಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.