ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಯೋಜನೆಯ ಡಿಪಿಆರ್‌ ಕುರಿತ ದಾಖಲೆಯಲ್ಲಿ ದಿನಾಂಕವೇ ಇಲ್ಲ: ಎಚ್‌.ಕೆ. ಪಾಟೀಲ

Last Updated 30 ಡಿಸೆಂಬರ್ 2022, 11:06 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಮಹದಾಯಿ ಯೋಜನೆಯ ಡಿಪಿಆರ್‌(ಸಮಗ್ರ ಯೋಜನಾ ವರದಿ)ಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ದಾಖಲೆಗಳಲ್ಲಿ ದಿನಾಂಕವೇ ಇಲ್ಲ. ಜನರ ದಿಕ್ಕು ತಪ್ಪಿಸುವ ಕೆಲಸ ಅವರಿಂದ ನಡೆದಿದೆ’ ಎಂದು ಶಾಸಕ ಎಚ್‌.ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರದಿಂದ ಹೊರಡಿಸುವ ಯಾವುದೇ ಆದೇಶ ಪ್ರತಿಗೆ ದಿನಾಂಕ ಇದ್ದೇ ಇರುತ್ತದೆ. ದಿನಾಂಕ ಇಲ್ಲವೆಂದಾದರೆ ಅದು ಅನಧಿಕೃತ. ಅಂತಹ ಆದೇಶ ಪ್ರತಿಯನ್ನು ಕೇಂದ್ರ ಸಚಿವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಆ ಪ್ರತಿಯನ್ನೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿವೇಶನದಲ್ಲಿ ಪ್ರದರ್ಶಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಜನರ ದಾರಿ ತಪ್ಪಿಸಲು ಈ ತಂತ್ರ ಹೆಣೆದಿದೆ’ ಎಂದು ಆರೋಪಿಸಿದರು.

‘ಮಹದಾಯಿ ಯೋಜನೆಯ ಡಿಪಿಆರ್‌ಗೆ 2002ರಲ್ಲಿಯೇ ಅನುಮೋದನೆ ದೊರಕಿದೆ. ಅದರ ನಂತರವೇ(ಅ. 28, 2023ರಂದು) ಅರಣ್ಯ ಇಲಾಖೆ ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡಿದ್ದು. ಇದೀಗ ಪರಿಷ್ಕೃತ ಡಿಪಿಆರ್‌ಗೆ ಅನುಮೋದನೆ ಪಡೆದಿದ್ದೇವೆ ಎಂದು ಹೇಳುತ್ತಿದ್ದಾರೆ. ಇದೇ ಜ. 2ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿರುವ ಜಲ ಆಂದೋಲನಕ್ಕೆ ತಡೆಯೊಡ್ಡಬೇಕು ಎಂದು ಹೀಗೆಲ್ಲ ಮಾಡುತ್ತಿದ್ದಾರೆ. ಇದು ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಜನರಿಗೆ ಮಾಡುತ್ತಿರುವ ಮೋಸ. ಚುನಾವಣೆ ಸಮೀಪಿಸುತ್ತಿದ್ದಂತೆ ಸುಳ್ಳು ಹೇಳುವುದರಲ್ಲಿ ಅವರು ನಿಸ್ಸೀಮರು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT