ಭಾನುವಾರ, ಸೆಪ್ಟೆಂಬರ್ 26, 2021
21 °C

ಹುಬ್ಬಳ್ಳಿಯಿಂದ ವಿಶೇಷ ಹೆಲಿಕಾಪ್ಟರ್‌ನಲ್ಲಿ ದಾವಣಗೆರೆಗೆ ತೆರಳಿದ ಅಮಿತ್ ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಹುಬ್ಬಳ್ಳಿಯಿಂದ ವಿಶೇಷ ಹೆಲಿಕಾಪ್ಟರ್ ‌ಮೂಲಕ ದಾವಣಗೆರೆಗೆ ತೆರಳಿದ ಅಮಿತ್‌ ಶಾ–ಸಂಗ್ರಹ ಚಿತ್ರ

ಹುಬ್ಬಳ್ಳಿ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹುಬ್ಬಳ್ಳಿಯಿಂದ ವಿಶೇಷ ಹೆಲಿಕಾಪ್ಟರ್ ‌ಮೂಲಕ ದಾವಣಗೆರೆಗೆ ತೆರಳಿದರು.

ಭಾರಿ ಬಿಗಿ ಭದ್ರತೆ ಇದ್ದ ಕಾರಣ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ವಿಮಾನ ನಿಲ್ದಾಣ ಪ್ರವೇಶ ನಿಷೇಧಿಸಲಾಗಿತ್ತು. ಶಾ ಜೊತೆ ಒಂದೇ ವಿಮಾನದಲ್ಲಿ ಬಂದ ಕೇಂದ್ರ ಸಚಿವ ಪಿಯೂಷ್ ಗೊಯೆಲ್ ಹುಬ್ಬಳ್ಳಿಯ ಹೋಟೆಲ್‌ನಲ್ಲಿ ತಂಗಿದ್ದಾರೆ. ಇಂದು ಸಂಜೆ ಅಮಿತ್ ಶಾ ನಗರಕ್ಕೆ ಮರಳಿ ಬರಲಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮಗಳ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ– ದಾವಣಗೆರೆ: ಅಮಿತ್ ಶಾ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು