ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಗಳ ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಗೆ ಬಂದಿದ್ದಾರೆ.
ಅವರು ತಂಗಿರುವ ವಿಮಾನ ನಿಲ್ದಾಣ ರಸ್ತೆಯ ಅನಂತ್ ಗ್ರ್ಯಾಂಡ್ ಹೋಟೆಲ್ ಮುಂಭಾಗದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೊಯೆಲ್, ಕೇಂದ್ರ ಕೌಶಲಾಭಿವೃದ್ದಿ ಸಚಿವ ಧರ್ಮೇಂದ್ರ ಪ್ರಧಾನ್, ರೈಲ್ವೆ ಖಾತೆ ರಾಜ್ಯ ಸಚಿವ ರಾವ್ ಸಾಹೇಬ್ ಪಾಟೀಲ್ ದಾನ್ವೆ, ರಾಜ್ಯ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕರಾದ ಜಗದೀಶ ಶೆಟ್ಟರ್, ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತ ಲಾಬೂರಾಮ್ ಇದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.