ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್ ರಾಜಕಾರಣ: ಸಚಿವ ಪ್ರಲ್ಹಾದ ಜೋಶಿ ಟೀಕೆ

Published 24 ಸೆಪ್ಟೆಂಬರ್ 2023, 10:37 IST
Last Updated 24 ಸೆಪ್ಟೆಂಬರ್ 2023, 10:37 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ರಾಷ್ಟ್ರಪತಿ ಆಯ್ಕೆ ಸಂದರ್ಭದಲ್ಲಿ ದ್ರೌಪದಿ ಮುರ್ಮು ಅವರಿಗೆ ಏಕೆ ಬೆಂಬಲ ನೀಡಿರಲಿಲ್ಲ? ಸೋಲುತ್ತೇವೆಂದು ಗೊತ್ತಿದ್ದರೂ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರು. ಚಿಲ್ಲರೆ ರಾಜಕಾರಣ ಕಾಂಗ್ರೆಸ್ ನ ಡಿಎನ್ಎನಲ್ಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಂಸತ್ ಭವನದ ಉದ್ಘಾಟನೆ ವಿಚಾರವಾಗಿ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದರು.

ಆಧುನಿಕ ವ್ಯವಸ್ಥೆಗೆ ತಕ್ಕಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ. ಆದರೆ, ಕಾಂಗ್ರೆಸ್ ಮುಖಂಡ ಜಯರಾಮ್ ರಮೇಶ್ ಅವರು, ಸಂಸತ್ ಭವನ 'ಮೋದಿ ಮಲ್ಟಿಫ್ಲೆಕ್ಸ್' ಎಂಬ ಕ್ಷುಲಕ ಹೇಳಿಕೆ ನೀಡಿದ್ದಾರೆ. ಜಗತ್ತೇ ಭವನವನ್ನು ಮೆಚ್ಚಿಕೊಳ್ಳುತ್ತಿದೆ. ಒಳ್ಳೆಯ ಕೆಲಸವನ್ನು ಕಾಂಗ್ರೆಸ್ ಸಹಿಸೊಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಅವರ ಕೆಳಮಟ್ಟದ ಮನಸ್ಥಿತಿ ಏನೆಂಬುದು ಇದರಿಂದ ಅರ್ಥವಾಗುತ್ತದೆ. ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಟೀಕಿಸಿದರು.

2011ರಲ್ಲಿ ಕಾಂಗ್ರೆಸ್ ಸರ್ಕಾರ ಜಾತಿಗಣತಿ ನಡೆಸಲಿಲ್ಲ.

ಆದರೀಗ ರಾಹುಲ್ ಗಾಂಧಿ ಈ ಬಗ್ಗೆ ಚಿಲ್ಲರೆ ಮಾತುಗಳನ್ನಾಡುತ್ತಿದ್ದಾರೆ‌. ಅತಿವೃಷ್ಟಿ , ಅನಾವೃಷ್ಟಿ ಏನಾದರೂ ಪ್ರಧಾನಿ ಮೋದಿ ಅವರನ್ನು ಬೈಯ್ಯುತ್ತಾರೆ. ಮೋದಿ ಜನಪ್ರಿಯತೆ ಕಾರಣ ಕನಸಲ್ಲೂ ಅವರ ನೆನಪು ಮಾಡಿಕೊಳ್ಳುತ್ತಾರೆ ಎಂದು ಲೇವಡಿ ಮಾಡಿದರು.

ಎಲ್ಲ ವರ್ಗಗಳಿಗೂ ಪ್ರಾತಿನಿಧ್ಯ ನೀಡಿ ಶೇ 33 ರಷ್ಟು ಮಹಿಳಾ ಮೀಸಲಾತಿ ಕಲ್ಪಿಸಲಾಗುತ್ತದೆ. ಕಾಂಗ್ರೆಸ್ ಈ ಹಿಂದೆಯೂ ಮೀಸಲಾತಿ ಕಲ್ಪಿಸಿಲ್ಲ, ಮುಂದೆಯೂ ಕಲ್ಪಿಸುವುದಿಲ್ಲ. ಸುಳ್ಳು ಹೇಳುವುದರಲ್ಲಿ ಅವರು ನಿಸ್ಸೀಮರು. ಮಹಿಳಾ ಮೀಸಲಾತಿ ಜಾರಿ ನೂರಕ್ಕೆ ನೂರರಷ್ಟು ಖಚಿತ. ಪ್ರಕ್ರಿಯೆಗಳು ಪೂರ್ಣಗೊಳ್ಳಲು ಸ್ವಲ್ಪ ಸಮಯ ಹಿಡಿಯುತ್ತದೆ ಎಂದರು.

ಬಿಜೆಪಿ, ಜೆಡಿಎಸ್ ಮೈತ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ರಾಜಕೀಯ ಬೆಳವಣಿಗೆಯಾದಾಗ ಚರ್ಚೆ, ವಿಮರ್ಶೆಗಳು ನಡೆಯುವುದು ಸಹಜ. ಇದೆಲ್ಲದರಿಂದ ಅಮೃತವೇ ಹೊರಬರುತ್ತೆ ಎಂಬ ನಂಬಿಕೆ ಇದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT