ಹುಬ್ಬಳ್ಳಿ: ‘ಬಿಜೆಪಿಯಲ್ಲಿ ಸಮರ್ಥರು ಇದ್ದಾರೋ ಇಲ್ಲವೋ ಎನ್ನುವುದಕ್ಕಿಂತ, ಇದ್ದವರು ಸಮರ್ಥರು ಇದ್ದಾರೋ ಇಲ್ಲವೋ, ಅವರನ್ನೇ ಮುಂದುವರೆಸಬೇಕೋ ಬೇಡವೋ ಎನ್ನುವ ಪ್ರಶ್ನೆಯಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ವಿಷಯ ಕುರಿತು ಶನಿವಾರ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು.

‘ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ನಿಯಂತ್ರಣವೇ ನಮ್ಮ ಮುಂದಿರುವ ಮುಖ್ಯಧ್ಯೇಯ’ ಎಂದರು.

‘ನಾನು ಹುಬ್ಬಳ್ಳಿಯಲ್ಲಿದ್ದಾಗ, ದೆಹಲಿಯಲ್ಲಿದ್ದಾಗ ರಾಜ್ಯದ ಸಚಿವರು ಭೇಟಿ ನೀಡುತ್ತಾ ಇರುತ್ತಾರೆ. ಕೇಂದ್ರ ಸಚಿವನಾಗಿರುವ ಹಿನ್ನೆಲೆಯಲ್ಲಿ, ಕೇಂದ್ರದಿಂದ ಆಗಬೇಕಿರುವ ಕೆಲಸಗಳ ಬಗ್ಗೆ ಚರ್ಚಿಸಲು ಬರುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ... ಸಿಎಂ ಸಮ್ಮುಖದಲ್ಲೇ ಕಾರಜೋಳಗೆ ಬಿಸಿ ಮುಟ್ಟಿಸಿದ ಬಿಜೆಪಿ ಶಾಸಕ ಅಭಯ ಪಾಟೀಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.