ಗುರುವಾರ , ಜನವರಿ 28, 2021
15 °C

ಜ. 29ರಿಂದ ಕೇಂದ್ರ ಬಜೆಟ್ ಅಧಿವೇಶನ: ಪ್ರಲ್ಹಾದ ಜೋಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಇದೇ ತಿಂಗಳ 29ರಿಂದ ಫೆಬ್ರುವರಿ 15ರ ತನಕ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. 30ರಂದು ವರ್ಚುವಲ್ ಮೂಲಕ ಸರ್ವಪಕ್ಷಗಳ ಸಭೆ ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾರ್ಚ್ 8ರಿಂದ ಏಪ್ರಿಲ್ 8ರ ತನಕ ಎರಡನೇ ಅವಧಿಯ ಬಜೆಟ್ ಅಧಿವೇಶನ ‌ಜರುಗಲಿದೆ. ಫೆ. 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

ಕರ್ನಾಟಕಕ್ಕೆ ಅಗತ್ಯವಾಗಿ ಬೇಕಾದ ಸೌಲಭ್ಯಗಳ  ಆದ್ಯತೆ ಪಟ್ಟಿಯನ್ನು ಕೇಂದ್ರಕ್ಕೆ  ನೀಡಲಾಗಿದೆ. ಸರ್ವಪಕ್ಷಗಳ ಸಭೆಯಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮುಕ್ತವಾಗಿ ಚರ್ಚೆ ನಡೆಯಲಿದೆ. ಕೋವಿಡ್ ಬಳಿಕ ಮೊದಲ ಸಲ ಪೂರ್ಣ ಪ್ರಮಾಣದಲ್ಲಿ ಸರ್ವಪಕ್ಷಗಳ ಸಭೆ ಜರುಗಲಿದೆ. ಪ್ರಶ್ನೋತ್ತರ ಅವಧಿಯೂ ಇರಲಿದೆ ಎಂದರು.

ಕೋವಿಡ್ ಲಸಿಕೆಯನ್ನು ಮೊದಲು ಪ್ರಧಾನಿ ತೆಗೆದುಕೊಳ್ಳಲಿ ಎಂದು ಕಾಂಗ್ರೆಸ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಕಾಂಗ್ರೆಸ್ ಮೋದಿ ಅವರನ್ನು ಹಾಗೂ ಬಿಜೆಪಿಯನ್ನು ವಿರೋಧಿಸುವ ಭರದಲ್ಲಿ ದೇಶವನ್ನೇ ವಿರೋಧಿಸುತ್ತಿದೆ. ಸಾಕಷ್ಟು ಶ್ರಮಪಟ್ಟು ಲಸಿಕೆ ಕಂಡು ಹಿಡಿದ ವಿಜ್ಞಾನಿಗಳಿಗೆ ಅವಮಾನ ಮಾಡುತ್ತಿದೆ ಎಂದರು.

ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ. ರಾಷ್ಟ್ರೀಯ ನಾಯಕರ ಜೊತೆ  ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು