ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಜಿಲ್ಲೆಯ 3 ಐಟಿಐಗಳ ಉನ್ನತೀಕರಣ -ಜಗದೀಶ ಶೆಟ್ಟರ್‌

Last Updated 21 ಜೂನ್ 2022, 4:31 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಜಿಲ್ಲೆಯ ಮೂರು ಐಟಿಐ ಕೇಂದ್ರಗಳನ್ನು ಉನ್ನತೀಕರಿಸಲಾಗುತ್ತಿದ್ದು, ಪ್ರತಿ ಐಟಿಐ ಕೇಂದ್ರಕ್ಕೆ ₹30 ಕೋಟಿ ಅನುದಾನ ಸಿಗಲಿದೆ’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ರಾಜ್ಯವ್ಯಾಪಿ ಇರುವ 150 ಐಟಿಐ ಕೇಂದ್ರಗಳನ್ನು ಉನ್ನತೀಕರಿಸಲಾಗಿರುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಚಾಲನೆ ನೀಡಿದ ಕಾರ್ಯಕ್ರಮದ ವರ್ಚ್ಯುವಲ್‌ ಪ್ರಸಾರವನ್ನು ವಿದ್ಯಾನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೀಕ್ಷಿಸಿದ ಬಳಿಕ ಶೆಟ್ಟರ್‌ ಮಾತನಾಡಿದರು.

ರಾಜ್ಯ ಸರ್ಕಾರದ ₹690 ಕೋಟಿ, ಟಾಟಾ ಟೆಕ್ನಾಲಜಿ ಕಂಪನಿ ಸೇರಿದಂತೆ 20 ಉದ್ಯಮ ಪಾಲುದಾರರ ₹4,060 ಕೋಟಿ ವೆಚ್ಚದಲ್ಲಿ ರಾಜ್ಯದ 150 ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳನ್ನು ತಾಂತ್ರಿಕ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಈ ಯೋಜನೆ ಅಡಿ ಜಿಲ್ಲೆಯ ಮೂರು ಐಟಿಐ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ’ ಎಂದರು.

ಕೈಗಾರಿಕಾ ತರಬೇತಿಗೆ ಮಹತ್ವವಿದೆ. ತಾಂತ್ರಿಕ ಶಿಕ್ಷಣ ಪಡೆಯುವುದರಿಂದ ಯುವಕರಿಗೆ ಉದ್ಯೋಗಾವಕಾಶಗಳು ಸಿಗಲಿವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯೆ ನಾಗರತ್ನಾ ಕೋಟೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT