ಉಪ್ಪಿನಬೆಟಗೇರಿ: ‘ಭಾರತದ ಮೂಲ ಶಕ್ತಿ ಅಧ್ಯಾತ್ಮ. ಇಲ್ಲಿನ ಪೂಜಾಪದ್ಧತಿ ವಿಭಿನ್ನವಿದ್ದರೂ, ಪ್ರತಿಯೊಬ್ಬರೂ ಧರ್ಮದ ಮಾರ್ಗದಲ್ಲಿ ಬದುಕು ನಡೆಸಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಶ್ರೀಗುರು ವಿರೂಪಾಕ್ಷೇಶ್ವರ ಜಾತ್ರೋತ್ಸವದ ಅಂಗವಾಗಿ ಕರ್ತೃ ಗದ್ದುಗೆ ಹತ್ತಿರದ ವಿಶ್ವಗುರು ಬಸವೇಶ್ವರರ ವೇದಿಕೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪುರಾಣ, ಪ್ರವಚನ ಮಂಗಲ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸಂಪದ್ಭರಿತ ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧಗಳು ನಡೆಯುತ್ತಿದ್ದು, ಅಲ್ಲಿನ ನಾಗರಿಕರಿಗೆ ನೆಮ್ಮದಿಯಿಂದ ಜೀವಿಸಲು ಸಾಧ್ಯವಾಗುತ್ತಿಲ್ಲ. ಅಲ್ಲಿಗೆ ದುಡಿಯಲು ಹೋದ ಜನರು ತಾಯ್ನಾಡಿಗೆ ಮರಳುತ್ತಿದ್ದಾರೆ. ಜಾಗತಿಕವಾಗಿ ಭಾರತ ಸೇರಿದಂತೆ ವಿವಿಧೆಡೆ ತೊಂದರೆ ಉಂಟಾಗಿದೆ. ಅಷ್ಟಾಗಿಯೂ ರಾಷ್ಟ್ರದ ಪ್ರತಿಯೊಬ್ಬ ಪ್ರಜೆಯೂ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಆಧ್ಯಾತ್ಮ ಮತ್ತು ಭಾರತಾಂಬೆಯ ಮಣ್ಣಿನ ಗುಣ’ ಎಂದು ಹೇಳಿದರು.

ಹಾವೇರಿ ಲೋಕಸಭಾ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಚುನಾವಣೆ ಎದುರಾಗುತ್ತಿದ್ದಂತೆ ರಾಜಕಾರಣಿಗಳು ದೇವಸ್ಥಾನಗಳಿಗೆ ಓಡಾಡುತ್ತಾರೆ. ಅವರು ಭಕ್ತಿಯಿಂದ ಬರಲ್ಲ, ಮತ ಮತ್ತು ಅಧಿಕಾರದ ಆಸೆಯಿಂದ ಬರುತ್ತಾರೆ. ಭಕ್ತರು ಯಾವುದೇ ಅಪೇಕ್ಷೆ ಇಲ್ಲದೆ ಪ್ರವಚನ ಕೇಳಲು ಬಂದಿದ್ದೀರಿ, ಇದು ನಿಜವಾದ ಭಕ್ತಿ’ ಎಂದು ಹೇಳಿದರು.

ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಅಮಿನಗಡದ ಶಂಕರರಾಜೇಂದ್ರ ಸ್ವಾಮೀಜಿ, ಬೈಲಹೊಂಗಲ ಮೂರುಸಾವಿರ ಮಠದ ನೀಲಕಂಠ ಸ್ವಾಮೀಜಿ, ಕುಂದರಗಿ- ಅಂಕಲಗಿಯ ಅಮರಸಿದ್ದೇಶ್ವರ ಸ್ವಾಮೀಜಿ ಮಾತನಾಡಿದರು. ಚಂದ್ರನಾಥ ಅಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಕುಮಾರ ವಿರೂಪಾಕ್ಷ ಶ್ರೀಗಳ ತುಲಾಭಾರ ಸೇವೆ ನಡೆಯಿತು. ನಂದಿಕೇಶ್ವರ ಪಂಡಿತ ವಿರೇಶ್ವರ ಶಾಸ್ತ್ರಿ ಅವರನ್ನು ಸನ್ಮಾನಿಸಲಾಯಿತು. ಮುಖಂಡರಾದ ಸವಿತಾ ಅಮರಶೆಟ್ಟಿ, ಶಂಕರ ಮುಗದ, ಜಯಕೀರ್ತ ಕಟ್ಟಿ, ಶಂಕರಕೋಮಾರ ದೇಸಾಯಿ, ಮಲ್ಲಿಕಾರ್ಜುನ ಮಸೂತಿ ಇದ್ದರು.

ಆರೋಗ್ಯ ತಪಾಸಣೆ: ಉಪ್ಪಿನ ಬೆಟಗೇರಿ ಮೂರುಸಾವಿರ ವಿರಕ್ತಮಠದಲ್ಲಿ ಭಾನುವಾರ ಧಾರವಾಡದ ಎಸ್.ಆರ್. ರಾಮನಗೌಡರ ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣೆ ನಡೆಯಿತು. ಶಿಬಿರದಲ್ಲಿ 200ಕ್ಕೂ ಅಧಿಕ ಜನರ ಆರೋಗ್ಯ ತಪಾಸಣೆ ಮಾಡಲಾಯಿತು.

ರಥೋತ್ಸವ ಇಂದು: ಜಾತ್ರಾ ಮಹೋತ್ಸವದ ಅಂಗವಾಗಿ ಮಾರ್ಚ್ 23ರಂದು ನಾಡಿನ ವಿವಿಧ ಸ್ವಾಮೀಜಿಗಳು ಹಾಗೂ ಭಕ್ತರ ಸಮ್ಮುಖದಲ್ಲಿ ಮಧ್ಯಾಹ್ನ 3.30ಕ್ಕೆ ಮಮದಾಪೂರ ವಿರಕ್ತಮಠದ ಮುರುಘೇಂದ್ರ ಶಿವಯೋಗಿಗಳ ಜಂಗಮೋತ್ಸವ, ಸಂಜೆ 5 ಗಂಟೆಗೆ ರಥೋತ್ಸವ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-24-65554140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.