ಧಾರವಾಡ: ಗ್ರಾಮೀಣ ಸೊಗಡಿನ ಜನಪದ ಕಲೆಯನ್ನು ಮುಂದಿನ ಪೀಳಿಗೆಗಾಗಿ ಉಳಿಸಿ ಬೆಳೆಸಬೇಕಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ವೀರಣ್ಣ ಒಡ್ಡೀನ ಹೇಳಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪುಡಕಲಕಟ್ಟಿಯ ಆತ್ಮಾನಂದ ಜನಪದ ಮಹಿಳಾ ಕಲಾ ಸಂಘದ ಎರಡನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ನಮ್ಮ ಸಂಸ್ಕೃತಿಯನ್ನು ಜನಮಾನಸಕ್ಕೆ ತಲುಪಿಸುವಲ್ಲಿ ಜನಪದ ಸಾಹಿತ್ಯ ಪ್ರಮುಖ ಪಾತ್ರವಹಿಸುತ್ತಿದೆ.
ಜನಪದ ಸಾಹಿತ್ಯಕ್ಕೆ ನಮ್ಮ ಬದುಕನ್ನು ತಿದ್ದಿ ಸಂಸ್ಕಾರಗೊಳಿಸುವ ಶಕ್ತಿ ಇದೆ. ಈ ಸಾಹಿತ್ಯವನ್ನು ವೈಜ್ಞಾನಿಕ ನೆಲೆಗಟ್ಟಿನ ಮೇಲೆ ಅಧ್ಯಯನ ಮಾಡುವ ಅಗತ್ಯವಿದೆ’ ಎಂದು ಹೇಳಿದರು.

ಪುಡಕಲಕಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ಬುಡರಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸತೀಶತುರಮರಿ, ಮಹಾಬಳೇಶ್ವರ ಕೋರಕೊಪ್ಪ, ಹಿಜ ನಪದಕಲಾವಿದರಾದ ಎಸ್. ಎನ್. ಬಿದರಳ್ಳಿ, ಮಡಿವಾಳಪ್ಪ ಸಿಂದೋಗಿ, ಗಿರೀಶರಡ್ಡೇರ, ಸಾವಕ್ಕ ಲೋಕೊರ, ಶಿಲ್ಪಾ ಚಂದರಗಿ, ಚನ್ನವ್ವ ಹಡಪದ, ಮಂಜುಳಾ ಗಾಳಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.