ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

HDK ವಿರುದ್ಧ ಅವಹೇಳನಕಾರಿ ಪದ ಬಳಕೆ: ಕ್ಷಮೆ‌ ಕೇಳಲು ಕೇಂದ್ರ ಸಚಿವ ಜೋಶಿ ಆಗ್ರಹ

Published : 29 ಸೆಪ್ಟೆಂಬರ್ 2024, 8:14 IST
Last Updated : 29 ಸೆಪ್ಟೆಂಬರ್ 2024, 8:14 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಒಬ್ಬ ಜನಪ್ರತಿನಿಧಿ, ಕೇಂದ್ರ ಸಚಿವರ ಬಗ್ಗೆ ಅಸಭ್ಯ ಭಾಷೆ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಲೋಕಾಯುಕ್ತ ಎಡಿಜಿಪಿಗೆ ಸರ್ವೀಸ್ ಕಂಡಕ್ಟ್ ನಿಯಮದ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಸೂಚಿಸಿದರು.

ಎಚ್.ಡಿ.ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಹೀಗೆ ಅಸಭ್ಯ ಭಾಷೆ ಬಳಸಿದವರಲ್ಲ. ಈ ಅಧಿಕಾರಿ ಬಗ್ಗೆಯೂ ಅವರು ಏಕವಚನದಲ್ಲಿ ಮಾತನಾಡಿಲ್ಲ ಎಂದು ಹೇಳಿದರು.

ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದ ಬಳಸಿರುವುದು ಅಧಿಕಾರಿಯ ಅಹಂಕಾರದ ಪರಮಾವಧಿಯಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅವರು ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಒಬ್ಬ ಜನಪ್ರತಿನಿಧಿ ಬಗ್ಗೆ ಲೋಕಾಯುಕ್ತ ಎಡಿಜಿಪಿ ಕೆಟ್ಟ ಪದ ಬಳಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಹಿಡಿದ ಕೈನ್ನಡಿ. ಇದು ಕಾಂಗ್ರೆಸ್ ಗೆ ಮುಳುವಾಗಲಿದೆ. ಕಾಂಗ್ರೆಸ್ ಎಂತೆಂಥ ಅಧಿಕಾರಿಗಳನ್ನು ಬೆಳೆಸುತ್ತಿದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಕಿಡಿ ಕಾರಿದರು.

ರಾಜ್ಯದಲ್ಲಿ ಈ ಸರ್ಕಾರ ಶಾಶ್ವತವಾಗಿ ಇರುವುದಿಲ್ಲ. ಸ್ವಲ್ಪ ಎಚ್ಚರ ವಹಿಸಿ ಮಾತನಾಡಿ, ಕೆಲಸ ಮಾಡಿ ಎಂದು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರಿಗೆ ಕೇಂದ್ರ ಸಚಿವ ಜೋಶಿ ಚಾಟಿ ಬೀಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT