ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲ್ಲಭಬಾಯಿ ಜೀವನ ಸ್ವೂರ್ತಿದಾಯಕ

Last Updated 1 ನವೆಂಬರ್ 2022, 6:37 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಅಖಂಡ ಭಾರತ ನಿರ್ಮಾಣಕ್ಕೆ ಶ್ರಮಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್‌ ಅವರ ಜೀವನ ಪ್ರತಿಯೊಬ್ಬ ಭಾರತೀಯರಿಗೆ ಸ್ಫೂರ್ತಿಯಾಗಿದೆ. ಅವರ ಜೀವನದ ಏಳುಬೀಳುಗಳು, ಕಲಿಕೆಯ ಕಷ್ಟಗಳು ಹಾಗೂ ಸಾಧನೆಯ ಛಲ ಯುವ ಪೀಳಿಗೆಗೆ ದಾರಿದೀಪವಾಗಬೇಕು’ ಎಂದುಟಿಪ್ಪು ಷಹೀದ ಪಾಲಿಟೆಕ್ನಿಕ್‍ ಕಾಲೇಜಿನ ಪ್ರಾಚಾರ್ಯ ಎಂ.ಎಸ್. ಮುಲ್ಲಾ ಹೇಳಿದರು.

ಪಟೇಲ್ ಅವರ ಜನ್ಮದಿನದ ಅಂಗವಾಗಿ ಕಾಲೇಜಿನಲ್ಲಿ ಸೋಮವಾರ ನಡೆದ ಏಕತಾ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಆಧುನಿಕ ಭಾರತಕ್ಕೆ ‍‍ಪಟೇಲ್ ಅವರು ಮಹತ್ತರ ಕೊಡುಗೆ ನೀಡಿದರು. ರಾಷ್ಟ್ರೀಯ ಏಕೀಕರಣಕ್ಕೆ ಅವರ ದೂರದೃಷ್ಟಿ ಮತ್ತು ಕಾರ್ಯದಕ್ಷತೆಯೇ ಕಾರಣ. ವಿದ್ಯಾರ್ಥಿಗಳು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಓದಬೇಕು. ಅವರು ತತ್ವಾದರ್ಶನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ಸಿವಿಲ್ ವಿಭಾಗದ ಮುಖ್ಯಸ್ಥ ರವೀಂದ್ರ ಸಿಂಗ್ ಅತ್ತಾರ ಮಾತನಾಡಿದರು. ಎನ್‍ಎಸ್‍ಎಸ್ ಅಧಿಕಾರಿ ಎಂ.ಬಿ. ರವಿ ರಾಷ್ಟ್ರೀಯ ಏಕತೆಯ ಪ್ರತಿಜ್ಞೆ ಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT