ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ವಾಲ್ಮೀಕಿ ಜಯಂತಿ ಆಚರಣೆ ಕಡ್ಡಾಯಗೊಳಿಸಿ’

Published : 24 ಸೆಪ್ಟೆಂಬರ್ 2024, 16:06 IST
Last Updated : 24 ಸೆಪ್ಟೆಂಬರ್ 2024, 16:06 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ‘ಶಾಲಾ–ಕಾಲೇಜು, ಗ್ರಾಮ ಪಂಚಾಯಿತಿಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಕಡ್ಡಾಯಗೊಳಿಸಬೇಕು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು’ ಎಂದು ಸಮಾಜದ ಮುಖಂಡರು ಆಗ್ರಹಿಸಿದರು.

ನಗರದ ತಾಲ್ಲೂಕು ಆಡಳಿತಸೌಧದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ಸಮಾಜದ ಸಮಸ್ಯೆಗಳ ಕುರಿತು ಕುಂದುಕೊರತೆ ಸಭೆ ನಡೆಸಬೇಕು. ಪರಿಶಿಷ್ಟ ಜಾತಿ, ಪಂಗಡದ ಜನರಿಗೆ ಸರ್ಕಾರಿ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು. ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಪ್ರೋತ್ಸಾಹಧನ ಸಕಾಲಕ್ಕೆ ಸಿಗಬೇಕು. ವಾಲ್ಮೀಕಿ ಪುತ್ಥಳಿ ಇರುವ ಸ್ಥಳದಲ್ಲಿ ನಾಮಫಲಕ ಅಳವಡಿಸಬೇಕು’ ಎಂದೂ ಒತ್ತಾಯಿಸಿದರು.

‘ಪರಿಶಿಷ್ಟ ಜಾತಿ, ಪಂಗಡದ ಕುಂದುಕೊರತೆ ಸಭೆಯನ್ನು ಜಿಲ್ಲಾಮಟ್ಟದಲ್ಲಿ ನಡೆಸಲಾಗುತ್ತಿದ್ದು, ಜಿಲ್ಲಾಡಳಿತ ಸೂಚಿಸಿದರೆ ತಾಲ್ಲೂಕು ಮಟ್ಟದಲ್ಲೂ ಸಭೆ ನಡೆಸಲಾಗುವುದು. ಜಯಂತಿ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆ ಕುರಿತ ಭಿತ್ತಿಪತ್ರ, ಕರಪತ್ರಗಳನ್ನು ವಿತರಿಸಲಾಗುತ್ತದೆ’ ಎಂದು ಅಧಿಕಾರಿಗಳು ತಿಳಿಸಿದರು.

ಅ.17ಕ್ಕೆ ಜಯಂತಿ: ‘ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 17ರಂದು ಆಚರಿಸಲಾಗುವುದು. ವಾಲ್ಮೀಕಿ ಚಿತ್ರಕ್ಕೆ ಪುಷ್ಪ ಸಮರ್ಪಿಸಿ, ಪೂಜೆ ಸಲ್ಲಿಸಲಾಗುವುದು. ಅವರ ಜೀವನಚರಿತ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ’ ಎಂದು  ಹುಬ್ಬಳ್ಳಿ ಶಹರ ತಹಶೀಲ್ದಾರ್‌ ಕಲಗೌಡ ಪಾಟೀಲ ಹೇಳಿದರು.

‘ಪ್ರತಿಭಾವಂತ ವಿದ್ಯಾರ್ಥಿಗಳು, ಸಮಾಜದ ಏಳಿಗೆಗಾಗಿ ಶ್ರಮಿಸಿದ ಸಾಧಕರನ್ನು ಸನ್ಮಾನಿಸಲಾಗುವುದು. ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದು ತಿಳಿಸಿದರು.

ಹೆಚ್ಚುವರಿ ತಹಶೀಲ್ದಾರ್‌ ಶಿವಾನಂದ ಹೆಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೀನಾಕ್ಷಿ ಗುದಗಿಯವರ, ನಿಲಯ ಪಾಲಕ ಪ್ರಹ್ಲಾದ್ ಗೆಜ್ಜಿ, ಸಮಾಜದ ಮುಖಂಡರಾದ ಮಾರುತಿ ಬೀಳಗಿ, ಯಲ್ಲಪ್ಪ ದಾಸರ, ಅರುಣಕುಮಾರ, ಅಶೋಕ ವಾಲ್ಮೀಕಿ, ಶಂಕರ ಕುದರಿ, ರವಿ ಮಳಗಿ, ಇಂದುಮತಿ ಶಿರಗಾಂವಿ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT