ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು: ಹುಬ್ಬಳ್ಳಿ, ಯಶವಂತಪುರ ವೇಳಾಪಟ್ಟಿ ಪರಿಷ್ಕರಣೆ

Published 6 ಅಕ್ಟೋಬರ್ 2023, 16:28 IST
Last Updated 6 ಅಕ್ಟೋಬರ್ 2023, 16:28 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಧಾರವಾಡ – ಬೆಂಗಳೂರು ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಮಯವನ್ನು ಪರಿಷ್ಕರಣೆ ಮಾಡಲಾಗಿದ್ದು, ಅ.7ರಿಂದಲೇ ಜಾರಿಗೆ ಬರಲಿದೆ. ಪರಿಷ್ಕೃತ ವೇಳೆಯು ಹುಬ್ಬಳ್ಳಿ ಹಾಗೂ ಯಶವಂತಪುರ ನಿಲ್ದಾಣಗಳಲ್ಲಿ ಮಾತ್ರ ಅನ್ವಯವಾಗುತ್ತದೆ.

ಕೆ.ಎಸ್.ಆರ್ ಬೆಂಗಳೂರು- ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ (20661) ಎಸ್.ಎಸ್.ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬೆಳಿಗ್ಗೆ 11:30/11:35 ರ ಬದಲು ಅದಕ್ಕಿಂಗ ಮುಂಚೆ ಬೆಳಿಗ್ಗೆ 11:00/11:05 ಗಂಟೆಗೆ ಆಗಮಿಸಿ/ ನಿರ್ಗಮಿಸಲಿದೆ. ಇದೇ ರೀತಿ, ಧಾರವಾಡ-ಕೆ.ಎಸ್.ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು (20662) ಯಶವಂತಪುರ ನಿಲ್ದಾಣಕ್ಕೆ ಸಂಜೆ 07:13/07:15 ರ ಬದಲು ಸಂಜೆ 06:58/07:00 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ. ಇನ್ನುಳಿದ ನಿಲ್ದಾಣಗಳಲ್ಲಿ ರೈಲು ಬರುವ ಸಮಯ ಹಾಗೂ ಹೊರಡುವ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT