ಹುಬ್ಬಳ್ಳಿ: ಹುಬ್ಬಳ್ಳಿ–ಪುಣೆ ನಡುವೆ ವಾರದಲ್ಲಿ ಮೂರು ದಿನ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಟಿಕೆಟ್ ದರ ಪ್ರಕಟಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೆ.16ರಂದು ರೈಲು ಸಂಚಾರಕ್ಕೆ ವರ್ಚ್ಯುವಲ್ ಮೂಲಕ ಚಾಲನೆ ನೀಡಲಿದ್ದು, ಸೆ.18ರಂದು ರೈಲು ಹುಬ್ಬಳ್ಳಿಯಿಂದ ಮೊದಲ ಕಾರ್ಯಾಚರಣೆ ಆರಂಭಿಸಲಿದೆ.
ಹುಬ್ಬಳ್ಳಿಯಿಂದ ಧಾರವಾಡವರೆಗಿನ ಚೇರ್ ಕಾರ್ (ಸಿಸಿ) ಪ್ರಯಾಣಕ್ಕೆ ₹365, ಎಕ್ಸಿಕ್ಯೂಟಿವ್ ಕ್ಲಾಸ್ (ಇಸಿ) ಪ್ರಯಾಣಕ್ಕೆ ₹690 ನಿಗದಿಪಡಿಸಲಾಗಿದೆ. ಹುಬ್ಬಳ್ಳಿಯಿಂದ ಬೆಳಗಾವಿಗೆ ಕ್ಯಾಟರಿಂಗ್ ಸೇರಿ ಚೇರ್ ಕಾರ್ ಪ್ರಯಾಣಕ್ಕೆ ₹ 520, ಎಕ್ಸಿಕ್ಯೂಟಿವ್ ಕ್ಲಾಸ್‌ಗೆ ₹1,005 ಮತ್ತು ಕ್ಯಾಟರಿಂಗ್ ಇಲ್ಲದೆ ಚೇರ್ ಕಾರ್‌ಗೆ ₹505, ಎಕ್ಸಿಕ್ಯೂಟಿವ್ ಕ್ಲಾಸ್‌ಗೆ ₹990 ದರ ಇದೆ.
ಹುಬ್ಬಳ್ಳಿಯಿಂದ ಪುಣೆಗೆ ಕ್ಯಾಟರಿಂಗ್ ಶುಲ್ಕ ಸೇರಿ ಚೇರ್ ಕಾರ್ ಪ್ರಯಾಣಕ್ಕೆ ₹1,530, ಎಕ್ಸಿಕ್ಯೂಟಿವ್ ಕ್ಲಾಸ್‌ಗೆ ₹2,780 ಮತ್ತು ಕ್ಯಾಟರಿಂಗ್ ಇಲ್ಲದೆ ಚೇರ್ ಕಾರ್ –₹1,185, ಎಕ್ಸಿಕ್ಯೂಟಿವ್ ಕ್ಲಾಸ್‌ಗೆ ₹2,385 ದರ ನಿಗದಿಪಡಿಸಲಾಗಿದೆ.
ಬುಧವಾರ, ಶುಕ್ರವಾರ ಮತ್ತು ಭಾನುವಾರ ಹುಬ್ಬಳ್ಳಿಯ ಶ್ರೀಸಿದ್ಧಾರೂಢಸ್ವಾಮಿ ರೈಲು ನಿಲ್ದಾಣದಿಂದ ಬೆಳಿಗ್ಗೆ 5 ಗಂಟೆಗೆ ಹೊರಡುವ ರೈಲು (20669), ಮಧ್ಯಾಹ್ನ 1.30ಕ್ಕೆ ಪುಣೆ ತಲುಪಲಿದೆ.
ಧಾರವಾಡ (ಬೆಳಿಗ್ಗೆ 5.15ರಿಂದ 5.17), ಬೆಳಗಾವಿ (6.55 ರಿಂದ 7), ಮೀರಜ್ (9 ರಿಂದ 9.05), ಸಾಂಗ್ಲಿ (9.15ರಿಂದ 9.17), ಸತಾರಾದಲ್ಲಿ (10.47ರಿಂದ 10.50) ನಿಲುಗಡೆ ಇರಲಿದೆ.
ಪುಣೆಯಿಂದ (ರೈಲು ಸಂಖ್ಯೆ 20670) ಗುರುವಾರ, ಶನಿವಾರ ಮತ್ತು ಸೋಮವಾರ ಮಧ್ಯಾಹ್ನ 2.15ಕ್ಕೆ ಹೊರಡುವ ರೈಲು ರಾತ್ರಿ 10.45ಕ್ಕೆ ಹುಬ್ಬಳ್ಳಿ ತಲುಪಲಿದೆ.
ಸತಾರ (4.37ರಿಂದ 4.40), ಸಾಂಗ್ಲಿ (6.10ರಿಂದ 6.12), ಮೀರಜ್ (6.40ರಿಂದ 6.45), ಬೆಳಗಾವಿ (8.35ರಿಂದ 8.40), ಧಾರವಾಡದಲ್ಲಿ (10.20ರಿಂದ 10.22) ರೈಲು ನಿಲ್ಲಲಿದೆ.
ರೈಲಿನಲ್ಲಿ ಎಂಟು ಬೋಗಿಗಳು ಇದ್ದು, ಅದರಲ್ಲಿ ಎಕ್ಸಿಕ್ಯೂಟಿವ್ ಕ್ಲಾಸ್‌ನ 52 ಆಸನಗಳು ಮತ್ತು 478 ಚೇರ್ ಕಾರ್ (ಸಿಸಿ) ಆಸನಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.