ಸೋಮವಾರ, ಡಿಸೆಂಬರ್ 5, 2022
21 °C

ರಾಜ್ಯೋತ್ಸವಕ್ಕೆ ವೈವಿಧ್ಯಮಯ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಕಿಮ್ಸ್, ಮಿನಿ ವಿಧಾನಸೌಧ, ಮಹಾನಗರ ಪಾಲಿಕೆ ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳನ್ನು ವಿದ್ಯುದ್ದೀಪಗಳಿಂದ ಅಲಂಕಾರ ಮಾಡಲಾಗಿದೆ. ಹಲವೆಡೆ ಕನ್ನಡ ಬಾವುಗಳು ರಾರಾಜಿಸುತ್ತಿವೆ.

ಪಾಲಿಕೆಯು ಈ ಬಾರಿ ವಾರವಿಡೀ ಸಾರ್ವಜನಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ವಿಜೇತರನ್ನು ಬಹುಮಾನಕ್ಕೆ ಆಯ್ಕೆ ಮಾಡಿದೆ. ಸಂಘ–ಸಂಸ್ಥೆಗಳು ಹಾಗೂ ಸಂಘಟನೆಗಳು ಸಹ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಂಡಿವೆ. ಪಾಲಿಕೆಯಿಂದ ಸಿದ್ಧಾರೂಢ ಮಠದ ಆವರಣದಲ್ಲಿ ಬೆಳಿಗ್ಗೆ 9.15ಕ್ಕೆ ಭುವನೇಶ್ವರಿ ಚಿತ್ರದ ಮೆರವಣಿಗೆ, ಇಂದಿರಾ ಗಾಜಿನ ಮನೆಯಲ್ಲಿ ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಕ್ರಮ

ಕವಿಗೋಷ್ಠಿ: ನೈರುತ್ಯ ರೈಲ್ವೆಯ ಕನ್ನಡ ಸಂಘದ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ 9.30ಕ್ಕೆ ಸಂಘದ ಕಚೇರಿಯಲ್ಲಿ ಕನ್ನಡ ಧ್ವಜಾರೋಹಣ ನಡೆಯಲಿದೆ. ನ. 5ರಂದು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, 16ಕ್ಕೆ ಕವಿಗೋಷ್ಠಿ ಹಾಗೂ ಗದಗ ರಸ್ತೆಯ ಚಾಲುಕ್ಯ ಇನ್‌ಸ್ಟಿಟ್ಯೂಟ್‌ನಲ್ಲಿ 23ಕ್ಕೆ ರಂಗೋಲಿ ಸ್ಪರ್ಧೆ ಮತ್ತು ಬಹುಮಾನ ಪ್ರಧಾನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಪತ್ರ ಸ್ಪರ್ಧೆ: ವಿನೋದಕುಮಾರ ಗುಂಜಾಳ ಗೆಳೆಯರ ಬಳಗವು ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ, ಕವಿಗಳ ಕುರಿತು ಕನ್ನಡ ಅಭಿಮಾನಿ ಪತ್ರ ಸ್ಪರ್ಧೆ ಏರ್ಪಡಿಸಿದೆ. ವಿಜೇತರಿಗೆ ಪ್ರಶಸ್ತಿ ಪತ್ರದ ಜೊತೆಗೆ ನಗದು ಬಹುಮಾನ ನೀಡಲಿದೆ. ಆಸಕ್ತರು ಎರಡು ಪುಟಗಳಿಗೆ ಮೀರದ ಲೇಖನಗಳನ್ನು ಡಿ. 30ರೊಳಗೆ ಬರೆದು ಕಳಿಸಬೇಕು. ಲೇಖನ ಕಳಿಸಬೇಕಾದ ವಿಳಾಸ: ವಿನೋದಕುಮಾರ ಗುಂಜಾಳ ಗೆಳೆಯರ ಬಳಗ, ಆದರ್ಶನಗರ, ವಿಜಯನಗರ, ಹುಬ್ಬಳ್ಳಿ-580 032. ಮಾಹಿಗೆ ಮೊ: 90084 47609 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು