ಭಾನುವಾರ, ಆಗಸ್ಟ್ 1, 2021
28 °C

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದತಿಗೆ ವಾಟಾಳ್‌ ನಾಗರಾಜ್ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Vatal Nagaraj urges government to cancel SSLC Examination

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಬೇಕು ಎಂದು ಆಗ್ರಹಿಸಿ ವಾಟಾಳ್‌ ನಾಗರಾಜ್ ಅವರು ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಜಾಗಟೆ ಬಡಿದು ಪ್ರತಿಭಟನೆ ಮಾಡಿದರು.

ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳು ಪರೀಕ್ಷೆ ಬರೆಯುವುದು ಕಷ್ಟವಾಗುತ್ತದೆ. ಆದ್ದರಿಂದ ಪರೀಕ್ಷೆ ರದ್ದು ಮಾಡಿ, ಎಲ್ಲರನ್ನೂ ಉತ್ತೀರ್ಣ ಮಾಡಬೇಕು ಎಂದು ಒತ್ತಾಯಿಸಿದರು.

9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅವರೊಂದಿಗೆ ಪೋಷಕರು ಬರಲಿದ್ದಾರೆ. ಹೊರಬರುವ ಲಕ್ಷಾಂತರ ಜನರ ರಕ್ಷಣೆ ಜವಾಬ್ದಾರಿ ಯಾರು ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಎಸ್ಸೆಸ್ಸೆಲ್ಸಿ | ಗರಿಷ್ಠ ಅಂಕ ಗಳಿಕೆ ಹೇಗೆ?

ತೆಲಂಗಾಣ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿದ್ದಾರೆ. ಇಲ್ಲಿಯೂ ಹಾಗೆಯೇ ಮಾಡಬೇಕು ಎಂದು ಆಗ್ರಹಿಸಿದರು.

ಕೊರೊನಾ ಕಡಿಮೆ ಇದ್ದಾಗ ಬಂದ್‌ ಮಾಡಿ, ಜಾಸ್ತಿ ಆದ ಮೇಲೆ ಸಂತೆ ಮಾಡುತ್ತಿದ್ದೀರಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಆನ್‌ಲೈನ್‌ ಶಿಕ್ಷಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಇದು ಪೋಷಕರ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು