‘ಭದ್ರತೆಗಾಗಿ ಹೊರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಕರೆಸಿಕೊಳ್ಳುತ್ತಿಲ್ಲ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮದ ಆಯೋಜಕರಿಗೆ ಮೈದಾನದ ಒಳಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಸೂಚಿಸಿದ್ದೇವೆ. ವಾಹನ ನಿಲುಗಡೆಗೆ ಕೆಲವೆಡೆ ಪ್ರದೇಶಗಳನ್ನು ಗುರುತಿಸಿದ್ದು ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಇರುವುದಿಲ್ಲ’ ಎಂದು ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದರು.