ಭಾನುವಾರ, ಮೇ 22, 2022
27 °C

ಮಹದಾಯಿ ಯೋಜನೆ ಕಾಮಗಾರಿ ಆರಂಭಕ್ಕೆ ವೀರೇಶ್ ಸೊಬರದಮಠ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮಹದಾಯಿ ನ್ಯಾಯಾಧೀಕರಣದಿಂದ ರಾಜ್ಯಕ್ಕೆ 13.5 ಟಿಎಂಸಿ ಅಡಿ ನೀರು ಹಂಚಿಕೆಯಾಗಿ ಎರಡು ವರ್ಷವಾದರೂ, ರಾಜ್ಯ ಸರ್ಕಾರ ಇದುವರೆಗೂ ಯೋಜನೆಯ ಕಾಮಗಾರಿಯನ್ನು ಆರಂಭಿಸಿಲ್ಲ ಎಂದು ಕರ್ನಾಟಕ ರೈತ ಸೇನಾ ಸಂಘಟನೆಯ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಗಾಗಿ ಸರ್ಕಾರ ₹500 ಕೋಟಿ ಹಣ ಮೀಸಲಿಟ್ಟಿದೆ. ರಾಜಕೀಯ ದಾಳವಾಗಿ ಈ ವಿಷಯವನ್ನು ಬಳಸಿಕೊಳ್ಳುವುದಕ್ಕಾಗಿ, ಈ ರೀತಿ ವಿಳಂಬ ಮಾಡಲಾಗುತ್ತಿದೆ ಆರೋಪಿಸಿದರು‌.

ರಾಜ್ಯಕ್ಕೆ ಹಂಚಿಕೆಯಾಗಿರುವ ನೀರನ್ನು ಬಳಸಿಕೊಳ್ಳುವುದಕ್ಕಾಗಿ, ಸರ್ಕಾರ ಶೀಘ್ರ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು. ನಂಜುಂಡಪ್ಪ ವರದಿ ಯಥಾವತ್ತಾಗಿ ಜಾರಿಯಾಗಬೇಕು.  ಬೆಂಗಳೂರಿನಲ್ಲಿರುವ ಒಂಬತ್ತು ಪ್ರಮುಖ ಇಲಾಖೆಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಬೇಕು. ಗಡಿ ಬಗ್ಗೆ ಆಗಾಗ ತಗಾದೆ ತೆಗೆಯುತ್ತಿರುವ ಮಹಾರಾಷ್ಟ್ರಕ್ಕೆ ಕಠಿಣ ಸಂದೇಶ ನೀಡಬೇಕು‌‌. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ, ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಗುರು ರಾಯನಗೌಡ್ರ, ಮಲ್ಲಿಕಾರ್ಜುನ ಆಲೇಕರ ಹಾಗೂ ಸಿದ್ದಲಿಂಗೇಶ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು