ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಸಚಿವ ಹಾಲಪ್ಪ ಆಚಾರ್‌ ಎಎಪಿ ಸದಸ್ಯರ ನಡುವೆ ಮಾತಿನ ಚಕಮಕಿ

Last Updated 13 ಜುಲೈ 2022, 16:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಸಾಕಷ್ಟು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ನೀವು ಇಷ್ಟು ದಿನ ಎಲ್ಲಿದ್ದೀರಿ? ಎಂದು ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತರು ಸಚಿವ ಹಾಲಪ್ಪ ಆಚಾರ್‌ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಬುಧವಾರ ನಗರದ ಸರ್ಕಿಟ್‌ ಹೌಸ್‌ನಲ್ಲಿ ನಡೆಯಿತು.

ಮಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಹಾಲಪ್ಪ ಆಚಾರ್‌ ಅವರು ಹೊರಗೆ ಬರುತ್ತಿದ್ದಂತೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

‘ಧಾರಾಕಾರ ಮಳೆಯಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದೆ. ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ಪರಿಹಾರ ಸಿಕ್ಕಿಲ್ಲ. ಪಾಲಿಕೆಯ ಐದು ಕಸದ ಕಾಂಪ್ಯಾಕ್ಟರ್‌ ಕಾರ್ಯನಿರ್ವಹಿಸುತ್ತಿಲ್ಲ. ರಸ್ತೆಗಳು ಹಾಳಾಗಿವೆ. ಸ್ಮಾರ್ಟಿ ಸಿಟಿ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಇವುಗಳನ್ನು ಏಕೆ ಗಮನಿಸುತ್ತಿಲ್ಲ. ನೀವು ಜಿಲ್ಲೆಗೆ ಅತಿಥಿ ಉಸ್ತುವಾರಿ ಸಚಿವರಂತೆ ಆಗಿದ್ದೀರಿ’ ಎಂದುಜಿಲ್ಲಾ ಘಟಕದ ಉಪಾಧ್ಯಕ್ಷ ವಿಕಾಸ ಸೊಪ್ಪಿನ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಹಾಲಪ್ಪ ಆಚಾರ್‌, ‘ಮಳೆ ಹಾನಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿ, ತಕ್ಷಣ ಪರಿಹಾರ ಬಿಡುಗಡೆ ಮಾಡಲು ಸೂಚಿಸಿದ್ದೇನೆ. ಜಿಲ್ಲೆಯ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಪ್ರತಿದಿನದ ಮಾಹಿತಿ ಪಡೆಯುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಬಾರಿ ಜಿಲ್ಲೆಗೆ ಭೇಟಿ ನೀಡುವೆ’ ಎಂದು ಭರವಸೆ ನೀಡಿದರು.

ಮಲ್ಲಪ್ಪ ತಡಸದ, ಮಲ್ಲಿಕಾರ್ಜುನಯ್ಯ ಹಿರೇಮಠ, ರೇವಣಸಿದ್ಧಪ್ಪ, ಡೇನಿಯಲ,ಭಾಷಾ ತಲೆವಾಡ, ಬಾಬು ಶೇಖ್, ಬಸವರಾಜ ತೆರದಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT