ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

'ಆನಂದಕಂದ ಪ್ರಶಸ್ತಿ' ಪುರಸ್ಕೃತ ಸಾಹಿತಿ ಗುರುಲಿಂಗ ಕಾಪಸೆ ಇನ್ನಿಲ್ಲ

Published 27 ಮಾರ್ಚ್ 2024, 2:57 IST
Last Updated 27 ಮಾರ್ಚ್ 2024, 2:57 IST
ಅಕ್ಷರ ಗಾತ್ರ

ಧಾರವಾಡ: ಸಾಹಿತಿ ಗುರುಲಿಂಗ ಕಾಪಸೆ (96) ಅವರು ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾದರು.

ನಗರದ ಸಪ್ತಾಪೂರದ ದುರ್ಗಾ ಕಾಲೊನಿಯ ಅವರ ಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಗುರುಲಿಂಗ ಕಾಪಸೆ ಅವರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಿ.ಕೆ.ಲೋಣಿಯಲ್ಲಿ 1928 ಏಪ್ರಿಲ್‌ 2ರಂದು ಜನಿಸಿದ್ದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ. ‘ಹಲಸಂಗಿ ಗೆಳೆಯರು’, ‘ಅಕ್ಕಮಹಾದೇವಿ’, ‘ಅರವಿಂದರು’, ’ಬಸವೇಶ್ವರ’, ಶಾಲ್ಮಲೆಯಿಂದ ಗೋದಾವರಿಯವರೆಗೆ (ಪ್ರವಾಸ ಕಥನ) ಮೊದಲಾದ ಕೃತಿಗಳನ್ನು ರಚಿಸಿದ್ಧಾರೆ.

‘ವರದರಾಜ ಆದ್ಯ ಪ್ರಶಸ್ತಿ’, ‘ಆನಂದಕಂದ ಪ್ರಶಸ್ತಿ’, ’ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ’ ಮೊದಲಾದ ಪುರಸ್ಕಾರಗಳು ಸಂದಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT