ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಳ್ನಾವರದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

Published 5 ಜೂನ್ 2024, 16:26 IST
Last Updated 5 ಜೂನ್ 2024, 16:26 IST
ಅಕ್ಷರ ಗಾತ್ರ

ಅಳ್ನಾವರ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ ಅವರು ಸತತ ಐದು ಬಾರಿ ಲೋಕಸಭಾ ಸದಸ್ಯರಾಗಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಜೋಶಿ ಅವರ ಅಭಿಮಾನಿಗಳು ಪಟ್ಟಣದ ಆನಂದ ಭವನದ ವೃತ್ತದ ಬಳಿ ಸೇರಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಎಂ.ಎಸ್.ಐ.ಎಲ್ ಮಾಜಿ ನಿರ್ದೇಶಕ ಶಿವಾಜಿ ಡೊಳ್ಳಿನ ಮಾತನಾಡಿ, ಪ್ರಹ್ಲಾದ ಜೋಶಿ ಅವರ ಅಧಿಕಾರ ಅವಧಿಯಲ್ಲಿ ಧಾರವಾಡ ಕ್ಷೇತ್ರ ಬಹಳಷ್ಟು ಅಭಿವೃದ್ಧಿ ಹೊಂದಿದೆ.
ಅಳ್ನಾವರ ರೈಲು ನಿಲ್ದಾಣವನ್ನು ₹ 17 ಕೋಟಿ ವೆಚ್ಚದಲ್ಲಿ ಮೇಲ್ದರ್ಜೇಗೇರಿಸುವ ಕಾರ್ಯ ಪ್ರಗತಿಯಲ್ಲಿದೆ. ಪ್ರತಿ ಹಳ್ಳಿಗೂ ಶುದ್ದ ಕುಡಿಯುವ ನೀರಿನ ಯೋಜನೆ ಅನುಷ್ಠಾನ,
ಬಣ್ಣ ದರ್ಪಣೆ ಕಾರ್ಯಕ್ರಮದಡಿ ನೂರಾರು ಶಾಲೆಗಳಿಗೆ ಬಣ್ಣ, ಡೆಸ್ಕ್, ಕೊಠಡಿ ನಿರ್ಮಾಣ ಸೇರಿ ಹಲವು ಕಾರ್ಯಕ್ರಮಗಳ ಮೂಲಕ ಜನಮನ್ನಣೆ ಗಳಿಸಿದೆ. ಇದು ಅವರ ಗೆಲುವಿಗೆ ಕಾರಣವಾಗಿದೆ ಎಂದರು.

ಮಹಿಳೆಯರ ಸ್ವಾವಲಂಬನೆ ಉದ್ದೇಶದಿಂದ ಉಚಿತ ಹೊಲಿಗೆ ತರಬೇತಿ ನೀಡುವುದರ ಜೊತೆಗೆ ಉಚಿತ ಹೊಲಿಗೆ ಯಂತ್ರ ವಿತರಿಸಿರುವುದು ಸಹ ಜೋಶಿಯವರ ಕಾರ್ಯಗಳಲ್ಲಿ ಒಂದಾಗಿದೆ ಎಂದರು.

ಅಡಿಕೆ ವ್ಯಾಪಾರಸ್ಥ ಸೋಮಶೇಖರ ಅಂಬಡಗಟ್ಟಿ, ರಮೇಶ ಲಿಂಗನಮಠ, ಪಿಕಾರ್ಡ್ ಬ್ಯಾಂಕ್ ಉಪಾಧ್ಯಕ್ಷ ಮಲ್ಲಪ್ಪ ಗಾಣಿಗೇರ, ನಾಗರಾಜ ಬುಡರಕಟ್ಟಿ, ಮಲ್ಲನಗೌಡ ಪಾಟೀಲ,
ರಾಮು ಕೋಲೆಕರ, ಸುರೇಶ ಕಳಸಾಪೂರ, ಅಜಯ ಗೋಕಾಕರ, ಮಂಜುನಾಥ ಕಟಗಿ, ಮಾರುತಿ ಬರಗುಂಡಿ, ಜಯಪ್ರಕಾಶ ಕೌಜಲಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT