ಹುಬ್ಬಳ್ಳಿ: ‘ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ನಿರ್ಧಾರವನ್ನು ಸ್ವಾಗತಿಸುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದ್ದಾರೆ.
‘ಸೂರತ್ ನ್ಯಾಯಾಲಯ ನೀಡಿದ್ದ ಶಿಕ್ಷೆಗೆ ತಡೆಕೋರಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈಗ ಅವರು ಸಂಸತ್ ಸದಸ್ಯತ್ವ ಸ್ಥಾನವನ್ನು ಮರಳಿ ಪಡೆಯಲಿದ್ದಾರೆ. ಇದು ಸತ್ಯಕ್ಕೆ ಸಿಕ್ಕ ಜಯ. ಸತ್ಯಕ್ಕೆ ಹಾಗೂ ಸತ್ಯದ ದಾರಿಯಲ್ಲಿ ನಡೆಯುವವರಿಗೆ ಯಾವಾಗಲೂ ನ್ಯಾಯ ದೊರೆಯುತ್ತದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ’ ಎಂದು ಪ್ರತಿಕ್ರಿಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.