ಮಂಗಳವಾರ, ಮಾರ್ಚ್ 21, 2023
29 °C

ವೇದಿಕೆಯಲ್ಲಿ ಪರಿಷತ್ ಸದಸ್ಯರಿಗಿಲ್ಲ ಸ್ಥಾನ: ಹೊರಟ್ಟಿ ಅಸಮಾಧಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಸರ್ಕಾರದ ವತಿಯಿಂದ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ, ವಿಧಾನ ಪರಿಷತ್ ಸದಸ್ಯರಿಗೆ ಸ್ಥಾನ ಇಲ್ಲದಿರುವ ಬಗ್ಗೆ ಸದಸ್ಯ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶಿಕ್ಷಣ ಸಚಿವ ಸುರೇಶಕುಮಾರ್ ಅವರಿಗೆ ಶನಿವಾರ ಪತ್ರ ಬರೆದಿರುವ ಅವರು, ‘ಕಾರ್ಯಕ್ರಮ ಆಯೋಜಿಸುವ ಕುರಿತು ಶಿಕ್ಷಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ವಿಧಾನ ಪರಿಷತ್ ಸದಸ್ಯರಿಗೆ ವೇದಿಕೆಯಲ್ಲಿ ಸ್ಥಾನವೇ ಇಲ್ಲ. ಇದು ಶಿಕ್ಷಕರ ಕ್ಷೇತ್ರದಿಂದ ಚುನಾಯಿತನಾದ ನಮಗೆ ಮಾಡಿದ ಅವಮಾನ’ ಎಂದಿದ್ದಾರೆ.

‘ಮಹತ್ವದ ಕಾರ್ಯಕ್ರಮಕ್ಕೆ ನಮ್ಮನ್ನು ಕಡೆಗಣಿಸುವ ಮೂಲಕ, ಹಕ್ಕಿಗೆ ಚ್ಯುತಿ ತರಲಾಗಿದೆ. ಗುರುವಂದನಾ ಕಾರ್ಯಕ್ರಮವಾದ ಶಿಕ್ಷಕರ ದಿನಾಚರಣೆಯ ವೇದಿಕೆಯಲ್ಲಿ ನಮಗೆ ಸ್ಥಾನ ಇಲ್ಲದಿರುವುದು ವಿಷಾದನೀಯ. ಇದರಿಂದ ನನಗೆ ನೋವುಂಟಾಗಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು