ಗುರುವಾರ , ಫೆಬ್ರವರಿ 20, 2020
29 °C

16ರಿಂದ ವಿಜಯಪುರ– ಹುಬ್ಬಳ್ಳಿ ಇಂಟರ್‌ಸಿಟಿ ರೈಲು ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ವಿಜಯಪುರ–ಹುಬ್ಬಳ್ಳಿ ಇಂಟರ್‌ಸಿಟಿ ರೈಲು ಸಂಚಾರ ಫೆ. 16ರಿಂದ ಆರಂಭವಾಗಲಿದ್ದು, ಅಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ನಿಲ್ದಾಣದಲ್ಲಿ ಹೊಸ ರೈಲಿಗೆ ಚಾಲನೆ ಸಿಗಲಿದೆ.

ವಾಣಿಜ್ಯ ನಗರಿಯಿಂದ ವಿಜಯಪುರಕ್ಕೆ ರೈಲಿನ ಸೌಲಭ್ಯ ಕಲ್ಪಿಸುವ ಅಗತ್ಯತೆ ಇದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಂಸದರಾದ ರಮೇಶ ಜಿಗಜಿಣಿಗಿ ಹಾಗೂ ಪಿ.ಸಿ. ಗದ್ದಿಗೌಡರ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವೀರಣ್ಣ ಚರಂತಿಮಠ ಅವರು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜನವರಿಯಲ್ಲಿ ಅಂಗಡಿ ನಗರದಲ್ಲಿ ರೈಲ್ವೆ ಅಧಿಕಾರಿಗಳ ಸಭೆ ನಡೆಸಿ ಹೊಸ ರೈಲು ಓಡಿಸಲು ತೀರ್ಮಾನಿಸಿದ್ದರು. ಈ ರೈಲು ವಿಜಯಪುರ, ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳ ನಡುವೆ ಸಂಪರ್ಕ ಕೊಂಡಿಯಾಗಿದೆ.

ರೈಲು ಸಂಚಾರ ರದ್ದು: ರೈಲ್ವೆ ಸಂಬಂಧಿತ ಕಾಮಗಾರಿ ನಡೆಯಲಿರುವ ಕಾರಣ ಫೆ. 24ರಿಂದ 26ರ ತನಕ ಹುಬ್ಬಳ್ಳಿ–ಹಜರತ್‌ ನಿಜಾಮುದ್ದೀನ್‌ ಲಿಂಕ್‌ ಎಕ್ಸ್‌ಪ್ರೆಸ್‌ ರೈಲಿನ ಸಂಚಾರವನ್ನು ರದ್ದು ಮಾಡಲಾಗಿದೆ.

ಫೆ. 15ರಂದು ನವದೆಹಲಿ–ಕೆಎಸ್‌ಆರ್‌ ಎಕ್ಸ್‌ಪ್ರೆಸ್ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಈ ರೈಲು ಗುಂತಕಲ್‌, ಬಳ್ಳಾರಿ, ರಾಯದುರ್ಗ, ಚಿಕ್ಕಜಾಜೂರು, ಅರಸಿಕೆರೆ ಮತ್ತು ತುಮಕೂರು ಮಾರ್ಗದ ಮೂಲಕ ಬೆಂಗಳೂರು ತಲುಪಲಿದೆ.

ಫೆ. 17ರಂದು ಮೈಸೂರು–ಸಾಯಿನಗರ ಶಿರಡಿ ಎಕ್ಸ್‌ಪ್ರೆಸ್‌ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಈ ರೈಲು ಹಾಸನ, ಅರಸಿಕೆರೆ, ಚಿಕ್ಕಜಾಜೂರು, ರಾಯದುರ್ಗ ಮಾರ್ಗದಲ್ಲಿ ತೆರಳಲಿದೆ ಎಂದು ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು