ಅಣ್ಣಿಗೇರಿ: ಕರ್ನಾಟಕ ದಲಿತ ವಿಮೋಚನಾ ಸಮಿತಿ ತಾಲೂಕು ಘಟಕ ವತಿಯಿಂದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟ ಗ್ರಾಮದಲ್ಲಿ ಈಚೆಗೆ ನಡೆದ ದಲಿತ ಯುವಕ ರವಿಚಂದ್ರ ದೇವಪ್ಪ ಮಾದರ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಹತ್ಯೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಿ ದಲಿತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರ ಮನವಿಯನ್ನು ತಹಶೀಲ್ದಾರ್ ಮಂಜುನಾಥ ದಾಸಪ್ಪನವರ ಸ್ವೀಕರಿಸಿ, ಕೂಡಲೇ ಸರ್ಕಾರಕ್ಕೆ ಸಲ್ಲಿಸಿ ನ್ಯಾಯ ದೊರಕಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.

ಕರ್ನಾಟಕ ದಲಿತ ವಿಮೋಚನಾ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ರಾಮಗಿರಿ, ರಾಜು ಹಳ್ಳಿಕೇರಿ, ಮಾರುತಿ ಕಾಳೆ, ಚಂದ್ರಕಾಂತ ನಾಲವತವಾಡ, ಯಮನಪ್ಪ ಬಂಡಿವಡ್ಡರ, ಬಸವರಾಜ ಜೋಗಿವಡ್ಡರ, ವೆಂಕಟೇಶ ವಡ್ಡರ, ಸಂಜಯ ನಾಲವತವಾಡ, ಉಮೇಶ ಕಲ್ಲವಡ್ಡರ, ಪ್ರವೀಣ ಕಲ್ಲವಡ್ಡರ, ಹೆಚ್ಚುವರಿ ಪಿಎಸ್ಐ ಉಮೇಶ ಪಾಟೀಲ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-24-200701811

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.