ಮಂಗಳವಾರ, ಮೇ 17, 2022
25 °C
ಪ್ರಾಣಾಪಾಯದಿಂದ ಪಾರು

ಧಾರವಾಡ | ಅಧಿಕಾರ ವಹಿಸಿಕೊಳ್ಳಲು ಹೊರಟಿದ್ದ ವಿಜಯಪುರ ನೂತನ ಡಿಸಿ ಕಾರು ಅಪಘಾತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರಿದ್ದ ಕಾರು ಮಂಗಳವಾರ ಬೆಳಿಗ್ಗೆ ಇಲ್ಲಿನ ಯರಿಕೊಪ್ಪ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ.

ಕುಟುಂಬ ಸಮೇತ ವಿಜಯಪುರಕ್ಕೆ ಹೊರಟಿದ್ದ ಇವರ ಕಾರು, ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ. ಪವಾಡಸದೃಶ್ಯ ರೀತಿಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತ ಸಂದರ್ಭದಲ್ಲಿ ಕಾರಿನಲ್ಲಿ ವಿಜಯಮಹಾಂತೇಶ ದಾನಮ್ಮನವರ, ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಅಳಿಯ ಪ್ರವಿಣಕುಮಾರ ಇದ್ದರು. ತಕ್ಷಣ ಇವರನ್ನು ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರವೀಣ್ ಕುಮಾರ್ ಅವರಿಗೆ ಬೆನ್ನುಹುರಿಗೆ ಪೆಟ್ಟಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರೆಲ್ಲ ಆರೋಗ್ಯವಾಗಿದ್ದರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.