ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಯಕ್ತಿಕ ಕೆಲಸಕ್ಕೆ ದೆಹಲಿ ಭೇಟಿ; ಮುಖಂಡರನ್ನು ಭೇಟಿಯಾಗಲ್ಲ: ಜಗದೀಶ ಶೆಟ್ಟರ್

Last Updated 12 ನವೆಂಬರ್ 2021, 13:56 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವೈಯಕ್ತಿಕ ಕೆಲಸದ ಮೇಲೆ ಶುಕ್ರವಾರ ದೆಹಲಿಗೆ ಬಂದಿದ್ದೇನೆ ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದರು.

ದೆಹಲಿ ಭೇಟಿ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ಪಕ್ಷದ ಮುಖಂಡರ ಕರೆ ಮೇರೆಗೆ ಅಥವಾ ಪಕ್ಷದ ಮುಖಂಡರನ್ನು ಭೇಟಿಯಾಗಲು ದೆಹಲಿಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಭೇಟಿ ನೀಡಿ ಬಂದ ಮರುದಿನವೇ ಜಗದೀಶ ಶೆಟ್ಟರ್‌ ಅವರು ದೆಹಲಿಗೆ ತೆರಳಿರುವುದಕ್ಕೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ಶೆಟ್ಟರ್ ಅವರ ಸಹೋದರ ಪ್ರದೀಪ ಶೆಟ್ಟರ್ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. ಅವರು ಪ್ರತಿನಿಧಿಸುತ್ತಿರುವ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿದ್ದಾರೆ. ಟಿಕೆಟ್‌ ಖಚಿತ ಪಡಿಸಿಕೊಳ್ಳುವ ದೃಷ್ಟಿಯಿಂದಲೂ ದೆಹಲಿಗೆ ಭೇಟಿ ನೀಡಿರಬಹುದು ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT