ಶುಕ್ರವಾರ, ಮೇ 27, 2022
22 °C

ವಿವೇಕಾನಂದರ 159ನೇ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಡಗೇರಿ: ಸ್ವಾಮಿ ವಿವೇಕಾನಂದರು ಉತ್ಕೃಷ್ಟ ಸಾಧನೆ ಮೂಲಕ ಎಲ್ಲರ ಮನದಲ್ಲಿ ನೆಲೆಸಿದ್ದು, ಯುವಕರಿಗೆ ಆದರ್ಶಪ್ರಾಯರಾಗಿದ್ದಾರೆ ಎಂದು ಶಿಕ್ಷಕ ಎನ್.ಎಚ್.ಮುಲ್ಲಾ ಹೇಳಿದರು.

ಕುಂದಗೋಳ ತಾಲ್ಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಸಂಘದವರು ಹಮ್ಮಿಕೊಂಡ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಈಗಿನ ಯುವಜನತೆ ಮೊಬೈಲ್‌ ಫೋನ್‌ಗಳ ಜೊತೆ ಸಮಯ ಕಳೆದು ಜೀವನದ ಅತ್ಯಮೂಲ್ಯ ಗಳಿಗೆ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಹೊರಬಂದು ಮಹಾಪುರುಷರ ಜೀವನಗಾಥೆ ಓದಬೇಕು’ ಎಂದರು.

ನಿವೃತ್ತ ಶಿಕ್ಷಕ ವಿ.ಡಿ. ಯರಗುಪ್ಪಿ ಮಾತನಾಡಿ ‘ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು’ ಎಂದರು.

ಅಧ್ಯಕ್ಷತೆಯನ್ನು ನಿವೃತ್ತ ಶಿಕ್ಷಕ ಎನ್.ಜಿ.ಪೂಜಾರ ವಹಿಸಿದ್ದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು. ಗಂಗಾಧರ ಮೇಗುಂಡಿ, ಗುರುನಾಥ ಹೊನ್ನಿಹಳ್ಳಿ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು