ಬುಧವಾರ, ಏಪ್ರಿಲ್ 1, 2020
19 °C

ಹುಬ್ಬಳ್ಳಿ | ಕೊರೊನಾ ಪಿಡುಗು: ಸಂತ್ರಸ್ತರ ನೆರವಿಗೆ ಮುಂದೆ ಬರುವ ದಾನಿಗಳ ನೋಂದಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೊರೊನಾ ವೈರಸ್ ನಿರ್ಮೂಲನೆಗಾಗಿ ದೇಶದಲ್ಲಿ ವಿಧಿಸಿರುವ 21 ದಿನಗಳ ಲಾಕ್‌ಡೌನ್ ವೇಳೆ ಸಹಾಯದ ಅಗತ್ಯ ಇರುವವರಿಗೆ ನೆರವಾಗಲು ಇಚ್ಛಿಸುವ ಸ್ವಯಂ ಸೇವಾ ಸಂಸ್ಥೆಗಳು ಮತ್ತು ದಾನಿಗಳು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಾನಿಗಳು ಆಹಾರ, ಬಟ್ಟೆ, ಮಾಸ್ಕ್, ಸ್ಯಾನಿಟೈಸರ್, ತರಕಾರಿ, ಹಣ್ಣು ನೀಡಬಹುದಾಗಿದೆ. ಶ್ರಮದಾನಕ್ಕೂ ಅವಕಾಶವಿದೆ. 

ಆಸಕ್ತರು ತಮ್ಮ ಹೆಸರು, ವಿಳಾಸ, ಸಂಪರ್ಕ ಸಂಖ್ಯೆ, ನೆರವು ನೀಡಬಹುದಾದ ವಸ್ತುಗಳು ಅಥವಾ ಸ್ವಯಂಸೇವೆಯ ವಿವರಗಳನ್ನು ನಿಗದಿತ ನೋಂದಣಿ ನಮೂನೆಯಲ್ಲಿ ಭರ್ತಿ ಮಾಡಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರನ್ನು (ಮೊ 94800 042112) ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು