ಧಾರವಾಡ: ‘ಚುನಾವಣಾ ಆಯೋಗವು ಆರಂಭಿಸಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್ಐಆರ್) ಎಲ್ಲರೂ ಸಹಕಾರ ನೀಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ಕುರಿತು ವಿವಿಧ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.

‘ಈ ಕಾರ್ಯಕ್ರಮದಲ್ಲಿ ಪ್ರತಿ ಮತಗಟ್ಟೆ ವ್ಯಾಪ್ತಿಯ ಮತದಾರರ ಪಟ್ಟಿಯನ್ನು ಮನೆ ಭೇಟಿ ಮೂಲಕ ಮತಗಟ್ಟೆ ಮಟ್ಟದ ಅಧಿಕಾರಿಗಳು ಪರಿಷ್ಕರಿಸುವರು. ಈ ಕಾರ್ಯಕ್ಕೆ ಪಕ್ಷಗಳು ಮತಗಟ್ಟೆ ಮಟ್ಟದಲ್ಲಿ ನೇಮಿಸುವ ಬಿಎಲ್ಎಗಳು ಸಹಕಾರ ನೀಡಬೇಕು’ ಎಂದು ಹೇಳಿದರು.

‘ಚುನಾವಣಾ ಆಯೋಗವು ಕಾಲಕಾಲಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಗ ಪ್ರಕ್ರಿಯೆ ನಡೆಸುತ್ತದೆ. ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಿದ ನಂತರ ಹಿಂದಿನ ಮತದಾರರ ಪಟ್ಟಿಗಳು ನಿಷ್ಕ್ರಿಯವಾಗುತ್ತವೆ ಮತ್ತು ಹೊಸದು ಮಾತ್ರ ಜಾರಿಯಲ್ಲಿರುತ್ತದೆ. ಹಿಂದಿನ ಮತದಾರರ ಪಟ್ಟಿಯನ್ನು ಉಲ್ಲೇಖಕ್ಕಾಗಿ ಮಾತ್ರ ಬಳಸಲಾಗುತ್ತದೆ’ ಎಂದರು.

ಬಿಜೆಪಿಯ ಸಿದ್ದು ಕಲ್ಯಾಣಶೆಟ್ಟಿ, ನಾಗಪ್ಪ ಸುತಗಟ್ಟಿ, ಕಾಂಗ್ರೆಸ್ನ ಪ್ರಕಾಶ ಹಳಿಯಾಳ, ಜೆಡಿಎಸ್ ಹು–ಧಾ ಮಹಾನಗರ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ, ದೇವರಾಜ ಕಂಬಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.