ಹುಬ್ಬಳ್ಳಿ: ‘ನಗರದಲ್ಲಿ ಬಡಾವಣೆಗಳು ಬೆಳೆದಂತೆ ಮತದಾರರ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಕಾರ್ಯಕರ್ತರು ಪ್ರತಿ ಮನೆಗಳಿಗೆ ಭೇಟಿ ನೀಡಿ ಮತದಾರರ ನೋಂದಣಿ ಕಾರ್ಯ ಮಾಡಬೇಕು’ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ನಗರದ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ನಡೆದ ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಪ್ರಮುಖರ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ‘ಸೆಂಟ್ರಲ್ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿವೆ. ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ₹400 ಕೋಟಿ ಬಿಡುಗಡೆಯಾಗಿದೆ. ಸ್ಮಾರ್ಟಸಿಟಿ ಅಡಿಯಲ್ಲಿ ಅಭಿವೃದ್ಧಿ ಕಾರ್ಯಗಳು ಸಾಗುತ್ತಿವೆ. ವಿಕಾಸ ಯೋಜನೆ, ಎಸ್.ಟಿ.ಪಿ, ಲೋಕೋಪಯೋಗಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅನುದಾನದಲ್ಲಿಯೂ ಮೂಲಸೌಲಭ್ಯಗಳ ಕಾಮಗಾರಿ ನಡೆಯುತ್ತಿದೆ’ ಎಂದರು.

ಪಾಲಿಕೆ ಸದಸ್ಯ ಸಂತೋಷ ಚವ್ಹಾಣ್ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಲಿಂಗರಾಜ ಪಾಟೀಲ, ಉಮಾ ಮುಕುಂದ, ನಾಗೇಶ ಕುಲಬುರ್ಗಿ, ಪಾಂಡುರಂಗ ಪಾಟೀಲ, ಡಿ.ಕೆ. ಚವ್ಹಾಣ್, ವೀರಣ್ಣ ಸವಡಿ, ತಿಪ್ಪಣ್ಣ ಮಜ್ಜಗಿ, ದತ್ತಮೂರ್ತಿ ಕುಲಕರ್ಣಿ, ಗೋಪಾಲ ಬದ್ದಿ, ವಿರೂಪಾಕ್ಷ ರಾಯನಗೌಡ್ರ, ವೆಂಕಟೇಶ ಮೇಸ್ತ್ರಿ, ರವಿ ನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.