ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ ಪರಿಶೀಲನೆ; ಮನೆ ಮನೆ ಸಮೀಕ್ಷೆ ಇಂದಿನಿಂದ

Published 20 ಜುಲೈ 2023, 15:30 IST
Last Updated 20 ಜುಲೈ 2023, 15:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಹುಬ್ಬಳ್ಳಿ –ಧಾರವಾಡ ಪೂರ್ವ, ಸೆಂಟ್ರಲ್ ಹಾಗೂ  ಪಶ್ಚಿಮ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿರುವ ಮತದಾರರ ಮನೆ ಮನೆ ಸಮೀಕ್ಷೆ ಕಾರ್ಯ ಜುಲೈ 21ರಿಂದ ಆಗಸ್ಟ್‌ 21ರವರೆಗೆ ನಡೆಯಲಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ತಿಳಿಸಿದ್ಧಾರೆ.

ಮತಗಟ್ಟೆ ವ್ಯಾಪ್ತಿಯ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ) ಮನೆಗಳಿಗೆ ಭೇಟಿ ನೀಡಿದಾಗ ಮತದಾರರು ಸರಿಯಾದ ಮಾಹಿತಿ ನೀಡಬೇಕು. ತಮ್ಮ ಹೆಸರು ಹಾಗೂ ತಮ್ಮ ಕುಟುಂಬ ಸದಸ್ಯರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ತಪ್ಪಾಗಿದ್ದಲ್ಲಿ ಮತದಾರರ ವಿವರಗಳನ್ನು ನಮೂದಿಸಲು ಮತಗಟ್ಟೆ ಮಟ್ಟದ ಅಧಿಕಾರಿಗಳ ನಿರ್ದೇಶನದಂತೆ ಅರ್ಜಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ತಮ್ಮ ಮತಗಟ್ಟೆ ವ್ಯಾಪ್ತಿಯ ಮತದಾರರ ನೋಂದಣಾಧಿಕಾರಿಗಳ/ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಮತದಾರರು ಸೇರ್ಪಡೆ/ ತಿದ್ದುಪಡಿ/ವರ್ಗಾವಣೆ/ ತೆಗೆದು ಹಾಕುವಿಕೆಗಾಗಿ ಚುನಾವಣಾ ಆಯೋಗದ ವೆಬ್‌ಸೈಟ್: https:/voters.eci.gov.in ಹಾಗೂ Voter
Helpline App ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT