ಹುಬ್ಬಳ್ಳಿ/ಬಳ್ಳಾರಿ: ಧಾರವಾಡ ಲೋಕಸಭಾ ಕ್ಷೇತ್ರದ ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಮುದಾಯ ಭವನದ ಮತಗಟ್ಟೆ ಸಂಖ್ಯೆ–112ರಲ್ಲಿ ಮತದಾನ ಮಾಡಿದ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ತನ್ವೀರ್ ಅಹಮದ್ ಮನಿಯಾರ್ (33) ಎಂಬುವರ ವಿರುದ್ಧ ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿಯ ನಗರದ ವಾಸವಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮತಗಟ್ಟೆ ಸಂಖ್ಯೆ–63ರಲ್ಲಿ ಮತದಾನ ಮಾಡಿದ ಚಿತ್ರವನ್ನು ವಾಟ್ಸ್‌ಆ್ಯಪ್ ಸ್ಟೇಟಸ್ ಹಾಕಿಕೊಂಡ ಆರೋಪದ ಮೇಲೆ ಬಳ್ಳಾರಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಕೆ.ತಿಲಕ್‌ಕುಮಾರ್ ವಿರುದ್ಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡೂ ಪ್ರಕರಣಗಳಲ್ಲಿ ಮತಗಟ್ಟೆ ಒಳಗೆ ಮೊಬೈಲ್ ಫೋನ್ ಒಯ್ಯಲು ಅನುವು ಮಾಡಿಕೊಟ್ಟ ಚುನಾವಣಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.