ಗುರುವಾರ , ಮಾರ್ಚ್ 23, 2023
21 °C

ಹಾನಗಲ್ ಅಭ್ಯರ್ಥಿ ದುರ್ಬಲರಾಗಿದ್ದರೋ, ಅಪಸ್ವರವಿತ್ತೋ ಗೊತ್ತಿಲ್ಲ: ಮುನೇನಕೊಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಹಾನಗಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನ ದುರ್ಬಲರಾಗಿದ್ದರೋ ಅಥವಾ ಅವರ ಬಗ್ಗೆ ಕ್ಷೇತ್ರದಲ್ಲಿ ಅಪಸ್ವರವಿತ್ತೋ ಗೊತ್ತಿಲ್ಲ. ಆದರೆ, ಮತದಾರರ ನಿರ್ಣಯಕ್ಕೆ ತಲೆ ಬಾಗುತ್ತೇವೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವರಾಜ ಸಜ್ಜನ ಅವರಿಗೆ ಪಕ್ಷ ಟಿಕೆಟ್ ನೀಡಿದ್ದಕ್ಕಾಗಿ, ಎಲ್ಲ ನಾಯಕರು ನಿಷ್ಠೆಯಿಂದ ಪ್ರಚಾರದಲ್ಲಿ ಪಾಲ್ಗೊಂಡು ಚುನಾವಣೆ ಎದುರಿಸಿದ್ದಾರೆ. ಆದರೆ ಕ್ಷೇತ್ರದ ಮತದಾರರು ತಿರಸ್ಕರಿಸಿದ್ದಾರೆ. ಇದಕ್ಕೆ ಕಾರಣವೇನು ಎನ್ನುವ ಕುರಿತು ಪರಿಶೀಲಿಸಲಾಗುವುದು ಎಂದರು.

ಪ್ರಜಾಪ್ರಭುತ್ವದಲ್ಲಿ ಮತದಾರರ ನಿರ್ಣಯ ಅಂತಿಮ. ರಾಜಕಾರಣದಲ್ಲಿ ಸೋಲು, ಗೆಲುವು ಸಾಮಾನ್ಯ. ಮುಖಭಂಗ ಎನ್ನುವುದು ಇಲ್ಲ. ಬಿಜೆಪಿಗೆ ಇದು ಹಿನ್ನೆಡೆಯೂ ಅಲ್ಲ. ಈ ಸೋಲನ್ನೇ ಸವಾಲಾಗಿ ಸ್ವೀಕರಿಸಿ ಮುಂದಿನ ದಿನಗಳಲ್ಲಿ ಗೆಲುವನ್ನಾಗಿ ಮಾಡಿಕೊಳ್ಳುತ್ತೇವೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು