ಹುಬ್ಬಳ್ಳಿ: 'ನನಗೆ ಸಿಎಂ ಆಗುವ ಹುಚ್ಚು ಹಿಡಿದಿದೆ' ಎಂದು ಕೆ.ಎಸ್.ಈಶ್ವರಪ್ಪ ಹೋದಲೆಲ್ಲ ಹೇಳುತ್ತಿದ್ದಾರೆ. 'ನಾನು ಯಾವಾಗ ಆಮಾತು ಹೇಳಿದ್ದೇನೆ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದೂ ಸ್ಪಷ್ಟಪಡಿಸಿದರು .

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಇಂದು ಉಪಚುನಾವಣೆ ನಡೆದಿದೆ, ಜನ ಯಾವ ತೀರ್ಪು ನೀಡಲಿದ್ದಾರೆ ನೋಡೋಣ. ಫಲಿತಾಂಶದ ಬಳಿಕ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಎಂದು ಹೇಳಿದ್ದೇನೆ ಅಷ್ಟೇ. ಅದನ್ನೇ ಈಶ್ವರಪ್ಪ ನನಗೆ ಅಧಿಕಾರದ ಹುಚ್ಚು ಎಂದುಕೊಂಡು ಓಡಾಡುತ್ತಿದ್ದಾರೆ ಎಂದರು .

ನಮ್ಮನ್ನು ಟೀಕಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅವರು ಹಿಂಬಾಗಿಲಿನಿಂದ ಬಂದು ಅಧಿಕಾರದ ಗದ್ದುಗೆ ಏರಿದವರು ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.