ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಟಾರ್ಟ್ಅಪ್ ಕೇಂದ್ರ ವಿಸ್ತರಣೆಗೆ ಹುಬ್ಬಳ್ಳಿ, ಕಲಬುರ್ಗಿಯಲ್ಲಿ ಪ್ರಾದೇಶಿಕ ಕಚೇರಿ

ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ: ಬಿವಿಬಿ ಕಾಲೇಜಿನ 75ನೇ ವರ್ಷಾಚರಣೆ
Last Updated 27 ಸೆಪ್ಟೆಂಬರ್ 2021, 10:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ಸ್ಟಾರ್ಟ್'ಅಪ್ ಕೇಂದ್ರಗಳು ಬೆಂಗಳೂರು ಕೇಂದ್ರೀಕೃತವಾಗಿದ್ದು, ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಪ್ರಾದೇಶಿಕ ಕಚೇರಿ ತೆರೆದು ಅವುಗಳನ್ನು ವಿಸ್ತರಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿಕಾಲೇಜಿನ 75ನೇ ವರ್ಷಾಚರಣೆ ಮತ್ತು ಕೆಎಲ್ಇ ಟೆಕ್ ಪಾರ್ಕ್ ಉದ್ಘಾಟಿಸಿ ಅವರು ಮಾತನಾಡಿದರು.

'ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಹೆಚ್ಚಾಗಿ ಬೆಂಗಳೂರಿನಲ್ಲಿಯೇ ಇವೆ. ಇದರಿಂದಾಗಿ ಬೆಂಗಳೂರು ಐಟಿ, ಬಿಟಿ ಕ್ಷೇತ್ರದಲ್ಲಿ ಸಾಕಷ್ಟು ಬೆಳೆಯುತ್ತಿದೆ. ರಾಜ್ಯದ ಇತರ ನಗರಗಳಲ್ಲಿಯೂ ಈ ಕೇಂದ್ರಗಳು ಜಾಸ್ತಿಯಾದರೆ, ಕೃಷಿ, ಕೈಗಾರಿಕೆ, ಆಹಾರ ಕ್ಷೇತ್ರಗಳಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸಲು ಸಾಧ್ಯ. ಈ ಹಿನ್ನೆಲೆಯಲ್ಲಿ ಕಾರ್ಯಪಡೆಯೊಂದನ್ನು ರಚಿಸಿ, ಅದಕ್ಕೆ ಬಿವಿವಿ ಎಂಜಿನಿಯರಿಂಗ್ ಕಾಲೇಜಿನ ಕುಲಪತಿ ಅಶೋಕ‌ ಶೆಟ್ಟರ್ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗುವುದು' ಎಂದರು.

ಸಚಿವ ಮುರುಗೇಶ ನಿರಾಣಿ, ಶಂಕರಪಾಟೀಲ ಮುನೇನಕೊಪ್ಪ, ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕುಲಪತಿ ಅಶೋಕ ಶೆಟ್ಟರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT