ಭಾನುವಾರ, ಅಕ್ಟೋಬರ್ 25, 2020
24 °C

ಹವಾಮಾನ ವೈಪರೀತ್ಯ: ಬೆಳಗಾವಿ ಬದಲು ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆದ ವಿಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬೆಳಗಾವಿಯಲ್ಲಿ ಸೋಮವಾರ ಬೆಳಿಗ್ಗೆ ಲ್ಯಾಂಡ್ ಆಗಬೇಕಿದ್ದ ಇಂಡಿಗೊ ಸಂಸ್ಥೆ ವಿಮಾನ ಹವಾಮಾನ ವೈಪರೀತ್ಯದ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿದೆ.

ಪ್ರಯಾಣಿಕರು ಬಸ್ ಮೂಲಕ ಬೆಳಗಾವಿಗೆ ಹೋದರು.

ಈ ವಿಮಾನ ಹೈದರಾಬಾದ್ ನಿಂದ ಹೊರಟಿತ್ತು. ನಿಗದಿಯಂತೆ ಬೆಳಗಾವಿಯಲ್ಲಿ ಲ್ಯಾಂಡ್ ಮಾಡಲು ಪೈಲಟ್ ಪ್ರಯತ್ನಿಸಿದ್ದರು‌. ಇದಕ್ಕೆ ಪೂರಕವಾದ ವಾತಾವರಣ ಇಲ್ಲದ ಕಾರಣ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿದೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ್ ಕುಮಾರ ಠಾಕರೆ ತಿಳಿಸಿದ್ದಾರೆ. ಪ್ರಯಾಣಿಕರು ಬಸ್ ಮೂಲಕ ಬೆಳಗಾವಿಗೆ ಹೋದರು.

ಬೆಳಗಾವಿ ವರದಿ: ಇಲ್ಲಿ ಲ್ಯಾಂಡ್ ಆಗಬೇಕಿದ್ದ ಟ್ರೂಜೆಟ್ ಕಂಪನಿಯ ವಿಮಾನ ತಿರುಪತಿಯಲ್ಲಿ, ಸ್ಪೈಸ್ ಜೆಟ್ ವಿಮಾನವನ್ನು ಹೈದರಾಬಾದ್ ನಲ್ಲಿ ಮತ್ತು ಇಂಡಿಗೊ ಕಂಪನಿಯ ವಿಮಾನವನ್ನು ಹುಬ್ಬಳ್ಳಿ ವಿಮಾನನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಮಂಜು ಹೆಚ್ಚಿನ ಪ್ರಮಾಣದಲ್ಲಿ ಇದ್ದಿದ್ದರಿಂದ ಹಾಗೂ ಹವಾಮಾನ ವೈಪರೀತ್ಯದ ಕಾರಣಕ್ಕೆ ಇಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗಿಲ್ಲ ಎಂದು ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದ ನಿರ್ದೇಶಕ ರಾಜೇಶ್ ಕುಮಾರ್ ಮೌರ್ಯ ಪ್ರಜಾವಾಣಿಗೆ ಮಾಹಿತಿ ನೀಡಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು