ಬುಧವಾರ, ಮಾರ್ಚ್ 3, 2021
18 °C

ಎಪಿಎಂಸಿ ಮುಚ್ಚಿದರೆ ಏನಾಗುತ್ತದೆ: ಸಚಿವ ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: 'ಎಪಿಎಂಸಿ ಹೊರಗಡೆ ರೈತರ ಉತ್ಪನ್ನಗಳಿಗೆ ಹೆಚ್ಚು ಬೆಲೆ ಸಿಗುತ್ತದೆ ಎಂದಾದರೆ, ಎಪಿಎಂಸಿ ಮುಚ್ಚಿದರೆ ಏನಾಯ್ತು' ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಪ್ರಶ್ನಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ರೈತರು ಬೆಳೆದ ಕೃಷಿ ಉತ್ಪನ್ನಗಳಿಂದ ಇಷ್ಟು ವರ್ಷ ಎಪಿಎಂಸಿಯಲ್ಲಿ ಮಧ್ಯವರ್ತಿಗಳು ಲಾಭ ಪಡೆಯುತ್ತಿದ್ದರು. ತಿದ್ದುಪಡಿ ಕಾಯ್ದೆಯಿಂದ ಹೊರಗಡೆ ವಹಿವಾಟು ನಡೆಸಲು ಅವಕಾಶ ಇರುವುದರಿಂದ ಅದರ ಲಾಭ ನೇರವಾಗಿ ರೈತರಿಗೆ‌ ಸಿಗಲಿದೆ. ಎಪಿಎಂಸಿಯಲ್ಲಿ ಮಧ್ಯವರ್ತಿಗಳ ಹಿತಬೇಕೋ, ಹೊರಗಡೆ ರೈತರ ಪ್ರಗತಿ ಬೇಕೋ ಎಂದು ರೈತರೇ ನಿರ್ಧರಿಸಲಿ' ಎಂದು ಹೇಳಿದರು.

'ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಇತರ ಪಕ್ಷಗಳ‌ ಕುಮ್ಮಕ್ಕಿನಿಂದ ಪ್ರತಿಭಟನೆ ನಡೆಯುತ್ತಿದೆ. ನಿಜವಾದ ರೈತರು ಅದರಲ್ಲಿ ಭಾಗಿಯಾಗಿಲ್ಲ. ಪ್ರಧಾನಿ ಮೋದಿ ವಿರುದ್ಧ ಮಾತನಾಡಲು ಯಾವುದೇ ವಿಷಯ ಇಲ್ಲದ ಕಾರಣ, ರೈತರ ದಿಕ್ಕು ತಪ್ಪಿಸುತ್ತಿದ್ದಾರೆ. ರಾಜಕೀಯ‌ ಪ್ರೇರಿತ ಪ್ರತಿಭಟನೆಗೆ ರೈತರು ಬೆಂಬಲ ನೀಡಬಾರದು' ಎಂದು ವಿನಂತಿಸಿದರು.
 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು