ಹುಬ್ಬಳ್ಳಿ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನನ್ನ ಸೋಲಿನ ಬಗ್ಗೆ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮಾಹಿತಿ ನೀಡುವೆ ಎಂದು ಮಹಾಂತೇಶ ಕವಟಗಿಮಠ ತಿಳಿಸಿದರು.

ಇಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ಸಂಘಟನಾತ್ಮಕವಾಗಿ ಅತ್ಯಂತ ಗಟ್ಟಿಯಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಸೋಲು ಕಂಡಿದ್ದು ಬೇಸರ ಮೂಡಿಸಿದೆ. ಸೋಲನ್ನು ಸವಾಲಾಗಿ ಸ್ವೀಕರಿಸಿ ಪಕ್ಷದ ವೇದಿಕೆಯಲ್ಲಿ ಪರಾಮರ್ಶೆ ಮಾಡಲಾಗುವುದು. ಚುನಾವಣೆಯ ಸಂಪೂರ್ಣ ವಿವರವನ್ನು ಅವರಿಗೆ ತಿಳಿಸಲಾಗುವುದು ಎಂದರು.

ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಮತ್ತು ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಗಟ್ಟಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುವುದು. ಪಕ್ಷದ ಆಂತರಿಕ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ಕಾಣಿಸಲಾಗುವುದು ಎಂದರು.

ಆಂತರಿಕವಾಗಿ ಯಾರ ಕಡೆಯಿಂದ ತಪ್ಪಾಗಿದೆ ಎನ್ನುವುದರ ಬಗ್ಗೆ ಇಲ್ಲಿನ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.