ಹುಬ್ಬಳ್ಳಿ: ‘ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ಧೆಗೆ ಕ್ಷೇತ್ರ ಸಿಗದಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆಯೇ?’ ಎಂದು ಸಚಿವ ಮುರುಗೇಶ ನಿರಾಣಿ ವ್ಯಂಗ್ಯವಾಡಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೋಲಾರದಿಂದ ಸ್ಪರ್ಧಿಸುವುದಾಗಿ ಹೇಳಿದ್ದ ಅವರು ಗೆಲ್ಲುವುದಿಲ್ಲ ಎಂಬುದು ಸಮೀಕ್ಷೆಯಲ್ಲಿ ತಿಳಿದಿದೆ. ಈಗ ಮತ್ತೆ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ’ ಎಂದರು.
‘ಕಾಂಗ್ರೆಸ್‌ನವರು ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಒಂದೂ ಒಳ್ಳೆಯ ಕೆಲಸ ಮಾಡಿಲ್ಲ. ಈಗ ಸಾಧ್ಯವಾಗದಂತಹ ಗ್ಯಾರಂಟಿಗಳನ್ನು ನೀಡುತ್ತಿದ್ದಾರೆ. ರಾಜ್ಯದ ಜನರು ಪ್ರಜ್ಞಾವಂತರಿದ್ದು, ಸುಳ್ಳು ಭರವಸೆ ನಂಬುವುದಿಲ್ಲ’ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.