ಹುಬ್ಬಳ್ಳಿ: ‘ಒಂಟಿ ಮಹಿಳೆಯರಿಗೆ, ನಿರ್ಗತಿಕರಿಗೆ ರಾತ್ರಿ ವೇಳೆ ಭದ್ರತೆ ಹಾಗೂ ವಸತಿ ಸೌಲಭ್ಯ ಕಲ್ಪಿಸಲು ಪೊಲೀಸ್ ಇಲಾಖೆ ಹಾಗೂ ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು.

ಹಳೇಹುಬ್ಬಳ್ಳಿಯಲ್ಲಿ ನಡೆದ ಒಂಟಿ ಮಹಿಳೆ ಅತ್ಯಾಚಾರ ಪ್ರಕರಣದ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಈಗಾಗಲೇ ಮಹಾನಗರ ಪಾಲಿಕೆ ಮಹಿಳೆಯರ ರಕ್ಷಣೆಗೆ ಶೆಲ್ಟರ್ (ಆಶ್ರಯ ತಾಣ) ನಿರ್ಮಿಸಿದೆ. ಪ್ರಮುಖ ಸ್ಥಳಗಳಲ್ಲಿ ಹಾಗೂ ಅಗತ್ಯವಿದ್ದಲ್ಲಿ ಹೆಚ್ಚುವರಿ ತಂಗುದಾಣ ನಿರ್ಮಿಸಿ ಭದ್ರತೆ ನೀಡಲು ಯೋಜನೆ ರೂಪಿಸಲಾಗುವುದು’ ಎಂದರು.

‘ಹುಬ್ಬಳ್ಳಿ–ಧಾರವಾಡ ಮಹಾನಗರಕ್ಕೆ ಸಾಕಷ್ಟು ಮಹಿಳೆಯರು, ಮಕ್ಕಳು ವಿವಿಧ ಕೆಲಸಗಳಿಗಾಗಿ ಬರುತ್ತಾರೆ. ಊರಿಗೆ ಅಥವಾ ಮನೆಗಳಿಗೆ ತೆರಳಲು ಒಮ್ಮೊಮ್ಮೆ ರಾತ್ರಿ ವೇಳೆ ಓಡಾಡುವ ಪರಿಸ್ಥಿತಿ ಎದುರಾಗುತ್ತವೆ. ಅಂಥವರಿಗೆ ಭದ್ರತೆ ನೀಡಲು ಪೊಲೀಸ್ ಇಲಾಖೆ ಜೊತೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.