ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19 | ವಿಶೇಷ ಬಸ್‌ನಲ್ಲಿ ಹುಬ್ಬಳ್ಳಿಗೆ ಮರಳಿದ ಕಾರ್ಮಿಕರು

Last Updated 3 ಮೇ 2020, 18:41 IST
ಅಕ್ಷರ ಗಾತ್ರ
ADVERTISEMENT
""

ಹುಬ್ಬಳ್ಳಿ: ಲಾಕ್‌ಡೌನ್‌ ಕಾರಣಕ್ಕೆ ಬೆಂಗಳೂರಿನಲ್ಲಿ ಬಂದಿಯಾಗಿದ್ದ ವಲಸೆ ಕಾರ್ಮಿಕರು ಭಾನುವಾರ ತಡರಾತ್ರಿ ಇಲ್ಲಿನ ಹೊಸ ಬಸ್‌ ನಿಲ್ದಾಣಕ್ಕೆ ಬಂದರು.

ಆದರೆ, ಬಹುತೇಕ ಬಸ್‌ಗಳಲ್ಲಿ ವಲಸೆ ಕಾರ್ಮಿಕರಿಗಿಂತ ಐಟಿ, ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುವ ಮತ್ತು ಓದಲು ಬೆಂಗಳೂರಿನಲ್ಲಿ ತಂಗಿರುವ ಯುವಕ, ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಮಧ್ಯರಾತ್ರಿನ ತನಕವೂ ಬಸ್‌ಗಳು ಬರುತ್ತಲೇ ಇದ್ದವು. ಪ್ರತಿ ಬಸ್‌ನಲ್ಲಿ 30 ಜನರನ್ನು ಕರೆ ತರಲಾಗಿತ್ತು.

ಬಸ್‌ ನಿಲ್ದಾಣಕ್ಕೆ ಬಂದ ಪ್ರತಿ ಪ್ರಯಾಣಿಕರನ್ನೂ ಥರ್ಮಲ್‌ ಸ್ಕ್ಯಾನಿಂಗ್‌ ಮೂಲಕ ಪರೀಕ್ಷೆಗೆ ಒಳಪಡಿಸಿ ಕೈ ಮೇಲೆ ಸೀಲ್‌ ಹಾಕಲಾಯಿತು. ಅವರಿಗೆ ಜಿಲ್ಲಾಡಳಿತದ ವತಿಯಿಂದ ಬಸ್‌ ನಿಲ್ದಾಣದಲ್ಲಿ ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು. ನಗರದಿಂದ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಸಮಾಜ ಕಲ್ಯಾಣ ಹಾಸ್ಟೆಲ್‌ಗಳಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿತ್ತು. ಗುರುದ್ವಾರ ಫೌಂಡೇಷನ್‌ನ ಪದಾಧಿಕಾರಿಗಳು ಕೂಡ ಪ್ರಯಾಣಿಕರಿಗೆ ಊಟದ ಪ್ಯಾಕೆಟ್‌ಗಳನ್ನು ಹಂಚಿದರು.

‘ಎಲ್ಲ ಪ್ರಯಾಣಿಕರನ್ನು ಥರ್ಮಲ್‌ ಸ್ಕ್ಯಾನಿಂಗ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ಅಗತ್ಯ ಇರುವವರಿಗೆ ಮನೆತನಕ ಕಳುಹಿಸಲು ವ್ಯವಸ್ಥೆಯನ್ನೂ ಮಾಡಲಾಗಿದೆ’‍ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಹಾಗೂ ವಲಸೆ ಕಾರ್ಮಿಕರ ನೋಡಲ್ ಅಧಿಕಾರಿ ಪುರುಷೋತ್ತಮ ಎನ್.ಆರ್. ತಿಳಿಸಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಮನಗೌಡರ್, ಹುಬ್ಬಳ್ಳಿ ನಗರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಡಿ.ಡಿ‌.ಪಿ.ಐ ಎಂ.ಎಲ್‌. ಹಂಚಾಟೆ, ಪಾಲಿಕೆ ವೈದ್ಯಾಧಿಕಾರಿ ಪ್ರಭು ಬಿರಾದಾರ, ಸಾರಿಗೆ ಅಧಿಕಾರಿ ಅಶೋಕ ಪಾಟೀಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT