ಜನರ ಮೇಲೆ ಹೊಸ ತೆರಿಗೆ: ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಯಡಿಯೂರಪ್ಪ

7

ಜನರ ಮೇಲೆ ಹೊಸ ತೆರಿಗೆ: ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಯಡಿಯೂರಪ್ಪ

Published:
Updated:

ಧಾರವಾಡ: ತೈಲ ಬೆಲೆ ಸುಂಕ ಏರಿಕೆಗೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.

ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿದ್ದ ಅವರು ಮಾತನಾಡಿ, ರಾಜ್ಯ ಸರ್ಕಾರ ಸಾಮಾನ್ಯ ಜನರ ಮೇಲೆ ಹೊಸ ಹೊಸ ತೆರಿಗೆ ಹೇರಲು ಹೊರಟಿದೆ. ತೈಲ ಬೆಲೆ ಸುಂಕ  ಕೂಡಲೇ ರಾಜ್ಯ ಸರ್ಕಾರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ವಿಧಾನಸೌಧದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದಕ್ಕೆ ವಿಧಾನಸೌಧದ ವೆಸ್ಟ್ ಗೇಟ್ ಬಳಿ ಸಿಕ್ಕ ಹಣವೇ ಉದಾಹರಣೆ. ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಕುಮಾರಸ್ವಾಮಿ ‌ಅಧಿಕಾರಕ್ಕೆ ಬರುವ ಮೊದಲು ಗಣಿಗಾರಿಗೆ ವಿರುದ್ಧ ಮಾತನಾಡಿದ್ದರು. ಈಗ ಮತ್ತೆ ಬಳ್ಳಾರಿಯಲ್ಲಿ ಗಣಿಗಾರಿಕೆ ಪ್ರಾರಂಭವಾಗಿದೆ. ಅವರು ‌ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ ಎಂದು ಲೇವಡಿ ಮಾಡಿದರು.

ಬರಹ ಇಷ್ಟವಾಯಿತೆ?

 • 9

  Happy
 • 1

  Amused
 • 1

  Sad
 • 0

  Frustrated
 • 2

  Angry

Comments:

0 comments

Write the first review for this !