ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರ ಆಶ್ರಯ ಕಾಲೊನಿಯಲ್ಲಿ ಶನಿವಾರ ಮುಸ್ಲಿಂ ಯುವಕನಿಂದ ಕೊಲೆಯಾದ ರಂಜಿತಾ ಬನಸೋಡೆ ಅವರ ಮೃತದೇಹ ನಗರದ ಕೆಎಂಸಿ-ಆರ್ಐ ಆಸ್ಪತ್ರೆಯ ಶವಾಗಾರದಲ್ಲಿ ಇಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕೆಎಂಸಿ-ಆರ್ಐ ಆಸ್ಪತ್ರೆ ಸೇರಿ ನಗರದ ಪ್ರಮುಖ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಮಾಡಲಾಗಿದೆ. 500 ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ.
.ಯಲ್ಲಾಪುರ: ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳೆಯ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ.
ಮಹಿಳೆಯ ಶವಪರೀಕ್ಷೆ 11ರ ವೇಳೆ ನಡೆಯಲಿದ್ದು, ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ಆಂಬುಲೆನ್ಸ್ನಲ್ಲಿ ಮೃತದೇಹವನ್ನು ಯಲ್ಲಾಪುರಕ್ಕೆ ಕಳುಹಿಸಲಾಗುವುದು. ಕೆಲವು ಸಂಘಟನೆಗಳ ಪ್ರತಿಭಟನೆ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಆಂಬುಲೆನ್ಸ್ ಸಾಗುವ ಮಾರ್ಗದಲ್ಲೂ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

'ದಲಿತ ಮಹಿಳೆಯರಿಗೆ ರಕ್ಷಣೆ ಎನ್ನುವುದೇ ಇಲ್ಲವಾಗಿದೆ. ಪದೇ ಪದೇ ಇಂಥ ಕೃತ್ಯಗಳು ನಡೆಯುತ್ತಿವೆ. ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ರಂಜಿತಾ ಅವರ ಪ್ರಾರ್ಥಿವ ಶರೀರದ ಮೆರವಣಿಗೆಯನ್ನು ವಿವಿಧ ಸಂಘಟನೆಯ ನೇತೃತ್ವದಲ್ಲಿ ಕಾರವಾರ ರಸ್ತೆಯವರೆಗೆ ನಡೆಸಿ, ಯಲ್ಲಾಪುರಕ್ಕೆ ಕಳುಹಿಸಲಾಗುವುದು' ಎಂದು ದಲಿತ ವಿಮೋಚನಾ ಸಮಿತಿಯ ಶ್ರೀಧರ ಕಂದಗಲ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.