ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗದಿಂದ ರೋಗ ದೂರ: ನಾಶಿ

ಗಿನ್ನಿಸ್ ದಾಖಲೆಯ ಯೋಗಾಥಾನ್: ರೈಲ್ವೆ ಕ್ರಿಕೆಟ್ ಮೈದಾನದಲ್ಲಿ ಯೋಗ
Last Updated 15 ಜನವರಿ 2023, 5:37 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸದೃಢ ಆರೋಗ್ಯ ಹೊಂದಲು ಯೋಗ ಸಹಕಾರಿಯಾಗಿದ್ದು, ರೋಗಗಳಿಂದಲೂ ದೂರವಿರಬಹುದು. ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ’ ಎಂದು ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ ಹೇಳಿದರು.

ನಗರದ ರೈಲ್ವೆ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ಗಿನ್ನಿಸ್ ದಾಖಲೆಯ ಬೃಹತ್ ಯೋಗಾಥಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಜಿಲ್ಲೆಯ ಆರು ಕಡೆ ಯೋಗಾಥಾನ್ ಆಯೋಜಿಸಲಾಗಿದ್ದು, ದಾಖಲೆಯ ಭಾಗವಾಗಲು ವಿವಿಧ ಶಾಲಾ–ಕಾಲೇಜು, ಸಂಘ–ಸಂಸ್ಥೆಗಳ ಐದು ಸಾವಿರಕ್ಕೂ ಹೆಚ್ಚು ಯೋಗಾಸಕ್ತರು ಉತ್ಸುಕತೆಯಿಂದ ಪಾಲ್ಗೊಂಡಿದ್ದಾರೆ’ ಎಂದರು.

ಶಂಖ ನಾದದೊಂದಿಗೆ ಯೋಗಾಥಾನ್ ಆರಂಭಗೊಂಡಿತು. ಯೋಗ ತರಬೇತುದಾರ ಸಂಜೀವ ಮಾರ್ಗದರ್ಶನದಲ್ಲಿ ತಾಡಾಸನ, ವೃಕ್ಷಾಸನ, ಪಾದ ಹಸ್ತಾಸನ, ತ್ರಿಕೋನಾಸನ, ದಂಡಾಸನ, ವಜ್ರಾಸನ, ಅರ್ಧ ವೃಷ್ಟಾಸನ, ಶಶಾಂಕಾಸನ, ಉತ್ತಾನ ಮಂಡೂಕಾಸನ, ವಕ್ರಾಸನ, ಮಕರಾಸನ, ಭುಜಂಗಾಸನ, ಶಲಬಾಸನ, ಶವಾಸನ, ಪವನ ಮುಕ್ತಾಸನ, ಕಪಾಲಬಾತಿ ಸೇರಿದಂತೆ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಲಾಯಿತು.

ಯೋಗಾಥಾನ್‌ನಲ್ಲಿ ಭಾಗವಹಿಸಿದ್ದ ನೆಹರು ಕಾಲೇಜಿಗೆ ಪ್ರಥಮ, ಹೆಗ್ಗೇರಿಯ ಆಯುರ್ವೇದ ಮಹಾವಿದ್ಯಾಲಯಕ್ಕೆ ದ್ವಿತೀಯ, ರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ‌ ಹಾಗೂ ಜೈನ್ ಕಾಲೇಜು ಸಮಾಧಾನಕರ ಬಹುಮಾನ ಪಡೆದುಕೊಂಡಿತು.

ಆಯುಷ್ ಇಲಾಖೆಯ ಉಪ ನಿರ್ದೇಶಕಿ ಡಾ. ಅನುರಾಧ ಚಂಚಲಕರ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಪಿ. ಪೂಜಾರ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ್ರ, ಡಾ. ಬಿ.ವಿ. ರಜಪೂತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT