ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶದ ಆರೋಪದಡಿ ದಾಖಲಿಸಲಾಗಿರುವ ಎರಡು ಪ್ರತ್ಯೇಕ ದೂರುಗಳನ್ನು ಪ್ರಕರಣದ ಆರೋಪಿಯಾದ ಶಾಸಕ ವಿನಯ ಕುಲಕರ್ಣಿ ಪರ ವಕೀಲರು ಹೈಕೋರ್ಟ್ನಲ್ಲಿ ಬಲವಾಗಿ ಆಕ್ಷೇಪಿಸಿದ್ದಾರೆ.

‘ಸುಳ್ಳು ಸಾಕ್ಷ್ಯನೀಡುವಂತೆ ಬೆದರಿಕೆ ಹಾಕಲಾಗಿದೆ‘ ಎಂಬ ಆರೋಪದಡಿ ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 195ರ ಅನುಸಾರ ಸಿಬಿಐ ದಾಖಲಿಸಿರುವ ಖಾಸಗಿ ದೂರನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ‘ಯ ವಿಶೇಷ ನ್ಯಾಯಾಲಯ (ಸಿಸಿಎಚ್–82) ವಿಚಾರಣೆಗೆ ಪರಿಗಣಿಸಿದ್ದು, ಇದನ್ನು ರದ್ದುಪಡಿಸಬೇಕು ಎಂದು ಕೋರಿ ವಿನಯ ಕುಲಕರ್ಣಿ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ವಿನಯ ಕುಲಕರ್ಣಿ ಪರ ವಕೀಲರು, ‘ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಒಂದೇ ಆರೋಪದಡಿ ಎರಡು ದೂರುಗಳನ್ನು ದಾಖಲಿಸಲಾಗಿದೆ. ಇದು ಸಂವಿಧಾನದ 20ನೇ ವಿಧಿಗೆ ವಿರುದ್ಧವಾಗಿದ್ದು ಇದನ್ನು ರದ್ದುಪಡಿಸಬೇಕು‘ ಎಂದು ಕೋರಿದರು. ಇದಕ್ಕೆ ಪ್ರತಿಯಾಗಿ ಸಿಬಿಐ ಪರ ವಕೀಲರು, ಸಮಯಾವಕಾಶ ಕೋರಿದ ಕಾರಣ ವಿಚಾರಣೆಯನ್ನು ಡಿಸೆಂಬರ್ 1ಕ್ಕೆ ಮುಂದೂಡಲಾಗಿದೆ.

ಸಿಬಿಐ ಸಲ್ಲಿಸಿರುವ ಖಾಸಗಿ ದೂರು ಮತ್ತು ಯೋಗಿಶ್ಗೌಡರ ತಮ್ಮ ಗುರುನಾಥಗೌಡ ಗೌಡರ್ ಸಲ್ಲಿಸಿರುವ ಪ್ರತ್ಯೇಕ ದೂರುಗಳು ಒಂದೇ ಆರೋಪಕ್ಕೆ ಸಂಬಂಧಿಸಿವೆ. ಇವುಗಳಲ್ಲಿ ಯೋಗಿಶ್ ಗೌಡರ್ ನೀಡಿದ್ದ ದೂರಿನನ್ವಯ ತನಿಖೆ ನಡೆಸಿದ್ದ ಧಾರವಾಡ ಪೊಲೀಸರು ಸಲ್ಲಿಸಿದ್ದ ‘ಬಿ‘ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿ ಮುಂದಿನ ತನಿಖೆಗೆ ಆದೇಶಿಸಿತ್ತು. ಇದರಲ್ಲಿ ಸಿಬಿಐ ದೂರನ್ನು ರದ್ದುಗೊಳಿಸಬೇಕು ಎಂಬುದು ವಿನಯ ಕುಲಕರ್ಣಿ ಅವರ ಮನವಿ.

ಪ್ರಕರಣವೇನು?: ಯೋಗೀಶ್ಗೌಡ ಗೌಡರ್ ಕೊಲೆ 2016ರ ಜೂನ್ನಲ್ಲಿ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್ನಲ್ಲಿ ವಿನಯ ಕುಲಕರ್ಣಿ ಅವರನ್ನು ಬಂಧಿಸಿ, ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.